ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದ.ಕದಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ

ಮಂಗಳೂರು| pavithra| Last Modified ಶುಕ್ರವಾರ, 20 ಡಿಸೆಂಬರ್ 2019 (11:05 IST)
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಎರಡು ಕಡೆ ದುಷ್ಕರ್ಮಿಗಳು ಬಸ್ ಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.ಬೆಳ್ತಂಗಡಿ ತಾಲೂಕು ಪುಂಜಾಲಕಟ್ಟೆ ವ್ಯಾಪ್ತಿಯ ಬಂಗೇರುಕಟ್ಟೆಯಲ್ಲಿ ಬೆಳಗಿನಜಾವ ಬಸ್ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಕ್ಕಿಂಜಿಯಲ್ಲಿ ಬಸ್ ತಡೆದು ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.


ಹಾಗೇ  ಪುತ್ತೂರು ತಾಲೂಕಿನ ಉಪ್ಪಿನಂಗಡಿ ವ್ಯಾಪ್ತಿಯ  ಕುಪ್ಪೆಟ್ಟಿಯಲ್ಲಿ ಮತ್ತೊಂದು ಖಾಸಗಿ ಬಸ್ ಮೇಲೂ ಕೂಡ  ಕಲ್ಲುತೂರಾಟ ನಡೆಸಿದ್ದಾರೆ.  ಧರ್ಮಸ್ಥಳದಿಂದ ಮಡೀಕೇರಿಗೆ ತೆರಳುತ್ತಿರುವ ಖಾಸಗಿ ಬಸ್ ನ ಮೇಲೆ  ಬೈಕ್ ನಲ್ಲಿ ಬಂದ ಕೆಲವು ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :