ಮಂಗಳೂರಿನಲ್ಲಿ ಪೊಲೀಸ್ ಗೋಲಿಬಾರ್ ಗೆ ಇಬ್ಬರು ಸಾವು; ವಿಡಿಯೋ ರಿಲೀಸ್ ಮಾಡಲು ಹೊರಟ ಕಾಂಗ್ರೆಸ್ ನಿಯೋಗ

ಮಂಗಳೂರು| pavithra| Last Modified ಶುಕ್ರವಾರ, 20 ಡಿಸೆಂಬರ್ 2019 (10:26 IST)
ಮಂಗಳೂರು : ಮಂಗಳೂರಿನಲ್ಲಿ ಪೊಲೀಸ್ ಗೋಲಿಬಾರ್ ಗೆ ಇಬ್ಬರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆಗೆ ಇದೀಗ ಕಾಂಗ್ರೆಸ್ ನಾಯಕರು  ತುಪ್ಪ ಸುರಿಯುವ ಕೆಲಸಕ್ಕೆ ಮುಂದಾಗಿದ್ದಾರೆ.ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಇದೀಗ ಕಾಂಗ್ರೆಸ್ ನಿಯೋಗ ಮಂಗಳೂರಿಗೆ ತೆರಳಲು ನಿರ್ಧರಿಸಿದ್ದಾರೆ. ವಿ.ಎಸ್.ಉಗ್ರಪ್ಪ, ಎಸ್.ಆರ್.ಪಾಟೀಲ್, ನಾಸಿರ್ ಅಹ್ಮದ್ , ಬಸವರಾಜ್ ರಾಯರೆಡ್ಡಿ ನಿಯೋಗ ಮಂಗಳೂರಿಗೆ ಭೇಟಿ ನೀಡಲಿದ್ದಾರೆ


ಹಾಗೇ ಇದೇ ವೇಳೆ  ಮಂಗಳೂರು ಏರ್ ಪೋರ್ಟ್ ನಲ್ಲಿ ಕಾಂಗ್ರೆಸ್ ನಾಯಕರು ನಿನ್ನೆ ನಡೆದ ಪೊಲೀಸ್ ಫೈರಿಂಗ್ ಮಾಡಿದ ವಿಡಿಯೋ ರಿಲೀಸ್ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಪ್ರತಿಭಟನಾಕಾರರನ್ನು ಕೆಣಕುವ ಕೆಲಸಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :