ಅವಿನಾಶ್ ಬಿ. WD ನರಕಕ್ಕಿಳ್ಸಿ ನಾಲ್ಗೆ ಸೀಳ್ಸಿಬಾಯಿ ಒಲಿಸಾಕಿದ್ರೂನೆಮೂಗ್ನಲ್ ಕನ್ನಡ ಪದವಾಡ್ತೀನಿನನ್ ಮನಸನ್ನ್ ನೀ ಕಾಣೆ!ಅಂತ ಜಿ.ಪಿ.ರಾಜರತ್ನಂ ತಮ್ಮ ಕನ್ನಡ ಮನಸ್ಸನ್ನು ಬಿಚ್ಚಿಟ್ಟಿದ್ದರು.ಕೈ ಕತ್ತರಿಸಿ, ನಾಲಿಗೆ ಸೀಳಿ, ಹೊಡಿ, ಬಡಿ, ಅಯೋಗ್ಯ, ಸುಳ್ಳ, ಭ್ರಷ್ಟಾಚಾರಿ, ಕಳ್ಳ ಎಂಬಿತ್ಯಾದಿ ಅತ್ಯಮೂಲ್ಯ ಪದ ಸಂಪತ್ತನ್ನು, ಕನ್ನಡದ ನುಡಿಗಳು ಹೊರಹೊಮ್ಮುವ ನಮ್ಮ ಜನ ನಾಯಕರ ಬಾಯಿಗಳ ಮೂಲಕ ಕೇಳಿಸಿಕೊಳ್ಳುತ್ತಲೇ ನಾವಿಂದು ಮಗದೊಂದು ಕನ್ನಡದ ಉತ್ಸವದ ಹೊಸ್ತಿಲಿಗೆ ತಲುಪಿದ್ದೇವೆ.ಪ್ರತೀ ಬಾರಿ ಕನ್ನಡ ರಾಜ್ಯೋತ್ಸವ ಬಂದಾಗ ನಾವೆಲ್ಲಾ