ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾರಾಯಿ ನಿಷೇಧ ಹಿಂತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜರ್ನಾರ್ಧನ ಪೂಜಾರಿ ಇತ್ತೀಚೆಗೆ ನೀಡಿರುವ ಹೇಳಿಕೆಗೆ ಪಕ್ಷದ ಮುಖಂಡರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಾರಾಯಿ ಜಾರಿಗೊಳಿಸುವುದಾಗಿ ಹೇಳಿರುವುದು ಪೂಜಾರಿ ಅವರವೈಯಕ್ತಿಕ ವಿಚಾರ ವಿನಃ ಪಕ್ಷದ ವಿಚಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ