ಅಮೇಥಿ: ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ತಾಕತ್ತಿದ್ರೆ ರಾಹುಲ್ ಗಾಂಧಿ ಸ್ವಕ್ಷೇತ್ರ ಅಮೇಥಿಯಲ್ಲಿ ಸ್ಪರ್ಧಿಸಲಿ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಸ್ ಸವಾಲ್ ಹಾಕಿದ್ದಾರೆ. ರಾಜನಾಥ್ ಸಿಂಗ್ ಮತ್ತು ನರೇಂದ್ರ ಮೋದಿ ತಮ್ಮನ್ನು ತಾವು ಪ್ರಭಾವಿ ನಾಯಕರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಇಂತಹ ನಾಯಕರು ಅಮೇಥಿಯಿಂದ ಸ್ಪರ್ಧಿಸಲೇ ಬೇಕು ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.