ಗ್ರಾಮದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಮಾನಭಂಗ; ಕೇಸ್ ದಾಖಲಿಸದಂತೆ ಬೆದರಿಕೆ

ರಾಂಚಿ| pavithra| Last Modified ಬುಧವಾರ, 14 ಅಕ್ಟೋಬರ್ 2020 (10:39 IST)
ರಾಂಚಿ : ಗ್ರಾಮದಲ್ಲಿ ವಾಸವಿದ್ದ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಅದೇ ಗ್ರಾಮದ ಐವರು ಯುವಕರು ಅಪಹರಿಸಿ ಮಾನಭಂಗ ಎಸಗಿದ ಘಟನೆ ಜಾರ್ಖಂಡ್ ನ ಗುಮ್ಲಾದ ಚೈನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಬಾಲಕಿಯ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳು ದೂರು ದಾಖಲಿಸದಂತೆ ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೇ  ಗ್ರಾಮ ಪಂಚಾಯಿತಿ ಮುಖಂಡರು ಕೂಡ ಬಾಲಕಿ ಕುಟುಂಬಸ್ಥರಿಗೆ ದೂರು ದಾಖಲಿಸದಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.> > ಆದರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಹಾಗೇ ಗ್ರಾಮದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಗ್ರಾಮದಲ್ಲಿ ಬೀಡುಬಿಟ್ಟಿದ್ದಾರೆ ಎನ್ನಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :