70ವರ್ಷಗಳಲ್ಲಿ ಕಾಂಗ್ರೆಸ್ ಕಟ್ಟಿದ ದೇಶವನ್ನು,ಬಿಜೆಪಿ 7ವರ್ಷಗಳಲ್ಲಿ ಮಾರಾಟ ಮಾಡಿದೆ : ರಾಹುಲ್

ನವದೆಹಲಿ| Ramya kosira| Last Modified ಭಾನುವಾರ, 12 ಸೆಪ್ಟಂಬರ್ 2021 (12:32 IST)
ನವ ದೆಹಲಿ : ಕಳೆದ ಏಳು ವರ್ಷಗಳಲ್ಲಿ ಕಾಂಗ್ರೆಸ್ ನೇತೃತ್ವದ ನಿರ್ಮೀಸಿದ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾರಾಟ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.
ಎನ್ ಎಸ್ ಯುಐ(ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಗಾಂಧಿ, ' ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ದುರ್ಬಲ ಪ್ರಧಾನಿಯೆಂದು ವಾಣಿಜ್ಯ ನಗರಿ ಮುಂಬೈನಲ್ಲಿ ಭಯೋತ್ಪಾದಕರ ದಾಳಿ ನಡೆದ ಸಂದರ್ಭದಲ್ಲಿ ಎಂದು ಕರೆಯಲಾಗುತ್ತಿತ್ತು. ಆದರೆ, ಪುಲ್ವಾಮ ದಾಳಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಮಾಧ್ಯಮಗಳು ಪ್ರಶ್ನಿಸಲಿಲ್ಲ ಏಕೆ" ಎಂದು ಖಡಕ್ ಪ್ರಶ್ನೆ ಮಾಡಿದ್ದಾರೆ.> ನಮ್ಮ ಪಕ್ಷ ಎಪ್ಪತ್ತು ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿಯತ್ತ ಸಾಗಿಸುವಲ್ಲಿ ಶತಪ್ರಯತ್ನ ಪಟ್ಟಿತ್ತು. ಕಾಂಗ್ರೆಸ್ ಪಕ್ಷ ದೇಶ ಕಟ್ಟುವಲ್ಲಿ ಮಾಡಿದ ಶ್ರಮವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇವಲ ಏಳು ವರ್ಷಗಳಲ್ಲಿ ಮಾರಾಟ ಮಾಡಿದೆ ಎಂದು ಗುಡುಗಿದ್ದಾರೆ.>  


ಇದರಲ್ಲಿ ಇನ್ನಷ್ಟು ಓದಿ :