Widgets Magazine

ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು. ಆದ್ರೆ ಲಾಬಿ ಮಾಡಲ್ಲ ಎಂದ ಶಾಸಕ

ನವದೆಹಲಿ| pavithra| Last Modified ಗುರುವಾರ, 17 ಸೆಪ್ಟಂಬರ್ 2020 (12:08 IST)
ನವದೆಹಲಿ : ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು. ಆದ್ರೆ ಲಾಬಿ ಮಾಡಲ್ಲ ಎಂದು ಬಿಜೆಪಿ ಶಾಸಕ  ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಹಲವು ಬಿಜೆಪಿ ನಾಯಕರು ದೆಹಲಿಗೆ ತೆರಳಿದ್ದಾರೆ. ಮೋದಿ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಿಜೆಪಿ ಸೈಕಲ್ ರ್ಯಾಲಿ ಕೂಡ ನಡೆಸಿದೆ.

ಶಾಸಕ  ಎಂ.ಪಿ.ರೇಣುಕಾಚಾರ್ಯ ಅವರು ಕೂಡ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಲು ದೆಹಲಿಗೆ ಬಂದಿಲ್ಲ. ಸಚಿವ ಸ್ಥಾನ ನೀಡುವುದು, ಬಿಡುವುದು ಸಿಎಂಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :