ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ ನಿಂದಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ| Krishnaveni K| Last Modified ಮಂಗಳವಾರ, 23 ಅಕ್ಟೋಬರ್ 2018 (09:34 IST)
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಆಜಾದ್ ಹಿಂದ್ ಪೌಜ್ 75 ನೇ ವಾರ್ಷಿಕೋತ್ಸವ ಪ್ರಯುಕ್ತ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಏಕವಚನದಲ್ಲಿ ಟೀಕಿಸಿದ್ದಾರೆ.

ನೇತಾಜಿ ಹೆಸರಿನಲ್ಲಿ ಪ್ರಧಾನಿ ಮೋದಿ ಗಿಮಿಕ್ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಅವರು 13 ವರ್ಷ ಗುಜರಾತ್ ಸಿಎಂ ಆಗಿದ್ದಾಗ ಮೋದಿ ಎಲ್ಲಿದ್ದ? ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.


ಚುನಾವಣೆ ಹತ್ತಿರ ಬರುತ್ತಿರುವಾಗ ಮೋದಿಗೆ ನೇತಾಜಿ, ಸರ್ದಾರ್ ವಲ್ಲಭಾಯ್ ಪಟೇಲ್, ನೆಹರು ಮುಂತಾದ ಸ್ವಾತಂತ್ರ್ಯ ಹೋರಾಟಗಾರರ ನೆನಪಾಗುತ್ತಿದೆ. ಇಷ್ಟು ದಿನ ಬಿಜೆಪಿ ಹಾಗೂ ಸಂಘದ ಕಚೇರಿಗಳಲ್ಲಿ ಇವರ ಫೋಟೋಗಳೂ ಇರಲಿಲ್ಲ. ಮೋದಿ ಮೊದಲು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಗೌರವ ಕೊಡಲು ಕಲಿಯಲಿ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
ಇದರಲ್ಲಿ ಇನ್ನಷ್ಟು ಓದಿ :