ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಪುರುಷರಿಬ್ಬರಿಂದ ಲೈಂಗಿಕ ಕಿರುಕುಳ

ಗುರುಗ್ರಾಮ್| pavithra| Last Modified ಮಂಗಳವಾರ, 6 ಏಪ್ರಿಲ್ 2021 (10:36 IST)
ಗುರುಗ್ರಾಮ್ : ಇಬ್ಬರು ಮಹಿಳೆಯರ ಮೇಲೆ ಪುರುಷರಿಬ್ಬರು ಲೈಂಗಿಕ ಕಿರುಕುಳ ನೀಡಿ ಆ್ಯಸಿಡ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಘಟನೆ ಗುರುಗ್ರಾಮ್ ನಲ್ಲಿ ನಡೆದಿದೆ.

ಮಹಿಳೆಯೊಬ್ಬಳ ತಂದೆ ಆಕೆಯ ಸಹೋದರಿಯ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ತಕ್ಷಣ ಬರುವಂತೆ ಕರೆ ಮಾಡಿದ್ದಾರೆ. ಹಾಗಾಗಿ ಮಹಿಳೆ ಕಚೇರಿ ಮುಗಿಸಿ ತಮ್ಮ ಸಹೋದ್ಯೋಗಿ ಮಹಿಳೆಯ ಜೊತೆ ಹೊರಟಿದ್ದಾಳೆ. ಆ ವೇಳೆ ದಾರಿಯಲ್ಲಿ ಸಿಕ್ಕ ವ್ಯಕ್ತಿಗಳಿಬ್ಬರು ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಸಹಕರಿಸದಿದ್ದರೆ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಮಹಿಳೆಯರು ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಲೈವ್ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.  ಇದರಲ್ಲಿ ಇನ್ನಷ್ಟು ಓದಿ :