ಕನ್ನಡದ ಹಿರಿಯ ಸಾಹಿತಿ ಡಾಕ್ಟರ್ ಸಾ.ಶಿ ಮರುಳಯ್ಯ (85) ಇಂದು ಬೆಳಿಗ್ಗೆ 7.45 ರ ಸುಮಾರಿಗೆ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು 15 ದಿನಗಳ ಹಿಂದೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಉಸಿರು ನಿಲ್ಲಿಸಿದ್ದಾರೆ. ಕಾವ್ಯ, ನಾಟಕ, ವಿಮರ್ಶೆ, ಸಂಶೋಧನೆ, ಪ್ರಹಸನ, ಜೀವನ ಚಿತ್ರಣ, ಕಾದಂಬರಿ, ಸಣ್ಣಕಥೆ, ಜಾನಪದ, ವ್ಯಾಕರಣ