ಮಾಜಿ ಸಚಿವ ಡಿಕೆ ಶಿವಕುಮಾರ್ ಅರೆಸ್ಟ್

ನವದೆಹಲಿ| pavithra| Last Modified ಮಂಗಳವಾರ, 3 ಸೆಪ್ಟಂಬರ್ 2019 (21:47 IST)
ನವದೆಹಲಿ : ಹೊಂದಿದ ಹಿನ್ನಲೆಯಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ  ಇಂದು ಅರೆಸ್ಟ್ ಮಾಡಿದೆ.
ದೆಹಲಿ ಫ್ಲ್ಯಾಟ್‍ನಲ್ಲಿ ಪತ್ತೆಯಾದ ದಾಖಲೆ ಇಲ್ಲದ 8.59 ಕೋಟಿ ರೂ. ಹಣದ ಪ್ರಕರಣ  ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿದೆ. ಸತತ ನಾಲ್ಕನೇ ದಿನವೂ ಮಾಜಿ ಸಚಿವ ಡಿಕೆ ಶಿವಕುಮಾರ್ ವಿಚಾರಣೆ ನಡೆಸಿದೆ.
ಇದೀಗ ಅವರನ್ನು ಮತ್ತಷ್ಟು ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ಅಕ್ರಮ ಹಣಕಾಸು ವ್ಯವಹಾರಗಳ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿ ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿದೆ.

ಇದರಲ್ಲಿ ಇನ್ನಷ್ಟು ಓದಿ :