ಗಾಂಧಿ ಪರಿವಾರವನ್ನು ಬಿಟ್ಟು ಕಾಂಗ್ರೆಸ್ ರಾಜಕಾರಣ ಮಾಡುವುದೇ?

ನವದೆಹಲಿ| guna| Last Updated: ಶನಿವಾರ, 17 ಮೇ 2014 (15:54 IST)
ನವದೆಹಲಿ: ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ
ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ

ಲೋಕಸಭೆ ಚುನಾವಣೆಯ ಹೀನಾಯ ಸೋಲಿನಿಂದ ಸೋನಿಯಾ ಮತ್ತು ರಾಹುಲ್ ಕಂಗೆಟ್ಟಿದ್ದು, ಸೋಲಿಗೆ ಹೊಣೆ ಹೊತ್ತು ರಾಜೀನಾಮೆಗೆ ಮುಂದಾಗಲಿದ್ದಾರೆಂದು ತಿಳಿದುಬಂದಿದೆ. ಆದರೆ ಗಾಂಧಿ ಕುಟುಂಬವನ್ನು ಬಿಟ್ಟು ರಾಜಕಾರಣ ಮಾಡುವುದಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಸರ್ವಥಾ ಒಪ್ಪುವುದಿಲ್ಲ. ಈ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯನ್ನು ಒಪ್ಪಿಕೊಳ್ಳುವುದಕ್ಕೆ ಕಾಂಗ್ರೆಸ್ ಮುಖಂಡರು ಸಿದ್ದರಾಗುವುದಿಲ್ಲ ಎಂದು ಭಾವಿಸಲಾಗಿದೆ.

ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅದನ್ನು ತಿರಸ್ಕರಿಬಹುದು ಎಂದು ಹೇಳಲಾಗುತ್ತಿದೆ. ಗಾಂಧಿ ಪರಿವಾರದ ಸಾರಥ್ಯವಿಲ್ಲದೇ ಕಾಂಗ್ರೆಸ್ ಪಕ್ಷವನ್ನು ಊಹಿಸಿಕೊಳ್ಳುವುದೂ ಕಷ್ಟ ಎಂದು ಹೇಳಲಾಗುತ್ತಿದೆ.
ಇದರಲ್ಲಿ ಇನ್ನಷ್ಟು ಓದಿ :