ನವದೆಹಲಿ : ನೂತನ ಠೇವಣಿಗಳನ್ನು ಸ್ವೀಕರಿಸದಂತೆ ನೀಡಿದ ಆದೇಶದ ವಿರುದ್ದ ಸಹಾರಾ ಸಂಸ್ಥೆ ಅಲಹಾಬಾದ್ ಹೈಕೋರ್ಟ್ ತಡೆ ನೀಡಿರುವುದನ್ನು ಪ್ರಶ್ನಿಸಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ.
ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರಿಜಿತ್ ಪಸಾಯತ್ ಪೀಠ್ ನೂತನ ಠೇವಣಿಗಳನ್ನು ಸ್ವೀಕರಿಸದಂತೆ ನೀಡಿದ ಆದೇಶದ ವಿರುದ್ದ ಸಹಾರಾ ಸಂಸ್ಥೆ ಅಲಹಾಬಾದ್ ಹೈಕೋರ್ಟ್ ತಡೆ ನೀಡಿರುವುದನ್ನು ಪ್ರಶ್ನಿಸಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಾಖಲಿಸಿದ ಪ್ರಕರಣವನ್ನು ಜೂನ್ 9 ರಂದು ವಿಚಾರಣೆಯನ್ನು ನಡೆಸುವುದಾಗಿ ತಿಳಿಸಿದ್ದಾರೆ.
ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ನಿನ್ನೆ ಸಹಾರಾ ಇಂಡಿಯಾ ಫೈನಾನ್ಶಿಯಲ್ ಕಾರ್ಪೋರೇಶನ್ ಲಿಮಿಟೆಡ್ ಕಾರ್ಯನಿರ್ವಾಹಕ ನಿರ್ದೇಶಕ ಓ.ಪಿ. ಶ್ರೀವಾಸ್ತವ್ ಅವರು ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಠೇವಣಿಗಳನ್ನು ಸ್ವೀಕರಿಸದಂತೆ ನೀಡಿದ ಆರ್‌ಬಿಐ ಆದೇಶಕ್ಕೆ ತಡೆ ನೀಡಿತ್ತು.
|