ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕಾಭಿವೃದ್ದಿಯು ಶೇ 8.5ರಷ್ಟು ಆಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಏಷಿಯಾದ ಅತಿ ದೊಡ್ಡ ಅರ್ಥವ್ಯವಸ್ಥೆಯಾಗಿರುವ ಭಾರತದ ಆಂತರಿಕ ಆರ್ಥಿಕಾಭಿವೃದ್ದಿಯ ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 9 ದಾಖಲಾಗಬಹುದು ಎಂದು ಅಂದಾಜಿಸಲಾಗಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಬಾರತದ ಆರ್ಥಿಕಾಭಿವೃದ್ದಿಯು ಶೇ 8.8ರಷ್ಟು ದಾಖಲಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಉನ್ನತ ಆಧಿಕಾರಿಗಳ ಪ್ರಕಾರ ಆರ್ಥಿಕಾಭಿವೃದ್ದಿಯ ದರ ಶೇ 8-8.5 ದಾಖಲಾಗಬಹುದು ಎಂದು ಅಂದಾಜು ಮಾಡಲಾಗಿದೆ. ಆದರೆ ಜಾಗತಿಕ ಮಟ್ಟದಲ್ಲಿ ಏರುತ್ತಿರುವ ಕಚ್ಚಾ ತೈಲದ ಬೆಲೆಯು ಆರ್ಥಿಕಾಭಿವೃದ್ದಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಕಳವಳ ವ್ಯಕ್ತಪಡಿಸಲಾಗುತ್ತಿದೆ.
|