ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಣದುಬ್ಬರ ನಿಯಂತ್ರಣದಿಂದ ಅಭಿವೃದ್ಧಿಗೆ ಧಕ್ಕೆಯಿಲ್ಲ: ರೆಡ್ಡಿ  Search similar articles
ಹಣದುಬ್ಬರ ನಿಯಂತ್ರಣವು ದೇಶದ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ವೈ.ವಿ.ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ದೇಶದ ಸಗಟು ಬೆಲೆ ಆಧಾರಿತ ಹಣದುಬ್ಬರವು ಹದಿಮೂರು ವರ್ಷಗಳಲ್ಲೇ ಅಧಿಕ ಮಟ್ಟಕ್ಕೇರಿರುವ ಹಿನ್ನೆಲೆಯಲ್ಲಿ, ಬೆಲೆ ಏರಿಕೆಯನ್ನು ಹತೋಟಿಗೆ ತರಲು ಕೇಂದ್ರ ಬ್ಯಾಂಕಿನ ಕ್ರಮವನ್ನು ನಿರೀಕ್ಷಿಸಲಾಗುತ್ತಿದೆ.

ಆಹಾರ ರಕ್ಷಣೆಯ ದೃಷ್ಟಿಕೋನವು ಧನಾತ್ಮಕವಾಗಿಯೇ ಉಳಿದಿದ್ದು, ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಪರಿಸ್ಥಿತಿಯು ಉತ್ತಮವಾಗಿಯೇ ಇದೆ ಎಂದು ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು.

ಏನೇ ಆದರೂ, ಗಗನಕ್ಕೇರಿದ ತೈಲ ಬೆಲೆಯು ಕಳವಳಕಾರಿಯಾಗಿದ್ದು, ಸಮಸ್ಯೆ ಮತ್ತು ಪರಿಹಾರಗಳ ಕುರಿತಾಗಿ ತೀವ್ರ ರೀತಿಯ ಪರಿಶೀಲನೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದ ಅವರು ಇದೇ ವೇಳೆ ಹೇಳಿದರು.

ತೈಲ ಬೆಲೆ ಏರಿಕೆಯಿಂದಾಗಿ ಉಂಟಾಗುತ್ತಿರುವ ಬೆಲೆ ಏರಿಕೆ ಒತ್ತಡವನ್ನು ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಮತ್ತಷ್ಟು
ಹಣದುಬ್ಬರ ಶೇ.5.5ಕ್ಕೆ ಇಳಿಯಲಿದೆ: ಸಿಎಂಐಇ
ಬ್ಯಾಂಕುಗಳಿಂದ ಇನ್ನಷ್ಟು ಬಡ್ಡಿದರ ಹೆಚ್ಚಳ
ಬುಲೆಟ್ ಟ್ರೇನ್‌ಗೆ ರೈಲ್ವೇಯಿಂದ ಜಾಗತಿಕ ಟೆಂಡರ್
ತೈಲ ಬೆಲೆ ನಿಯಂತ್ರಣಕ್ಕೆ ಭಾರತ-ಸೌದಿ ಚರ್ಚೆ
2 ವರ್ಷಗಳಲ್ಲಿ 1.3 ಟ್ರಿಲಿಯನ್ ಆದಾಯ ಗಳಿಸಲಿರುವ ಗಲ್ಫ್
ಹಣದುಬ್ಬರ-ಆತಂಕ ಬೇಡ: ಚಿದಂಬರಂ