ಬಡ್ಡಿದರಗಳು ಈಗಾಗಲೇ ಗರಿಷ್ಠ ಮಟ್ಟದಲ್ಲಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ಮುಂದಿನ ಹಣಕಾಸು ಕ್ರಮಗಳನ್ನು ತೆಗೆದುಕೊಳ್ಳುವವರೆಗೆ ಬಡ್ಡಿದರದಲ್ಲಿ ಯಾವುದೇ ಬದಲಾವಣೆಯನ್ನು ಉಂಟುಮಾಡುವ ಸಾಧ್ಯತೆಯಿಲ್ಲ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.
ಬಡ್ಡಿದರವು ಗರಿಷ್ಠ ಮಟ್ಟದಲ್ಲಿದೆ ಅಥವಾ ಗರಿಷ್ಠ ಮಟ್ಟಕ್ಕೆ ಸಮೀಪದಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಯಾವುದೇ ಹಣಕಾಸು ಕ್ರಮಗಳನ್ನು ಕೈಗೊಳ್ಳದ ಹೊರತಾಗಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಎಸ್‌ಬಿಐ ಮುಖ್ಯಸ್ಥ ಒ.ಪಿ.ಭಟ್ ಸುದ್ದಿಗಾರರಿಗೆ ಹೇಳಿದ್ದಾರೆ.
ತೈಲ ಬೆಲೆಯಲ್ಲಿ ಇಳಿಕೆ ಉಂಟಾಗಿದ್ದು, ಮುಂಗಾರು ಉತ್ತಮವಾಗಿದೆ, ಆವಶ್ಯಕ ವಸ್ತುಗಳ ಬೆಲೆಯು ಗಗನಕ್ಕೇರಿದೆ ಮತ್ತು ಜಾಗತಿಕ ಆರ್ಥಿಕತೆಯು ಕುಸಿತ ಕಾಣುತ್ತಿದೆ. ಈ ಎಲ್ಲಾ ಕಾರಣಗಳು ಬಡ್ಡಿದರ ಏರಿಕೆಗೆ ಪುಷ್ಠಿ ನೀಡಿವೆ.
|