ಜಾಗತಿಕ ಮಾರುಕಟ್ಟೆಯಲ್ಲಿನ ಆರ್ಥಿಕ ಬಿಕ್ಕಟ್ಟು ದೇಶದ ಹಣಕಾಸು ವ್ಯವಸ್ಥೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಅಭಿಪ್ರಾಯಪಟ್ಟಿದ್ದಾರೆ.
ಅಂತಾರಾಷ್ಟ್ರೀಯ ಹಣಕಾಸು ಬಿಕ್ಕಟ್ಟು ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವಂತಹ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಇದರಿಂದಾಗಿ ಹಣಕಾಸು ವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರಲು ಸಾಧ್ಯವಿಲ್ಲ ಎಂದು ಅಹ್ಲುವಾಲಿಯಾ ಹೇಳಿದರು.
ಭಾರತ ಹಣಕಾಸು ವ್ಯವಸ್ಥೆ ನಿಯಂತ್ರಿತವಾಗಿದ್ದು ಜಾಗತಿಕ ಮಟ್ಟದಲ್ಲಿ ಆರ್ಥಿಕ ತೊಂದರೆ ಎದುರಾದಲ್ಲಿ ಭಾರತವಷ್ಟೆ ಅಲ್ಲ ಜಗತ್ತಿನ ಎಲ್ಲ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.
|