ಆರ್ಥಿಕ ಬಿಕ್ಕಟ್ಟನ್ನು ಬಗೆಹರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಸರಕಾರಗಳು ಶೀಘ್ರಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿವೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.
ಸರಕಾರ ಮತ್ತು ಸೆಂಟ್ರಲ್ ಬ್ಯಾಂಕ್ ಮಧ್ಯೆ ನಡೆದ ಒಪ್ಪಂದದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಡಿ.ಸುಬ್ಬರಾವ್ ಹೇಳಿದ್ದಾರೆ ಎಂದು ಸಚಿವ ಚಿದಂಬಂರಂ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ವಿಶೇಷವಾಗಿ ಆರ್ಥಿಕ ಬಿಕ್ಕಟ್ಟು ಸೇರಿದಂತೆ ಹಣಕಾಸಿನ ಸ್ಥಿತಿಗತಿಯ ಕುರಿತಂತೆ ಪರಿಶೀಲನಾ ಸಭೆಯನ್ನು ನಡೆಸಿದ್ದು ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ವಿದೇಶಗಳು ತೆಗೆದುಕೊಂಡ ಕ್ರಮಗಳನ್ನು ಪರಿಶೀಲಿಸಲಾಯಿತು .
ಸಭೆಯಲ್ಲಿ ಆರ್‌ಬಿಐ ಗವರ್ನರ್ ಡಿ.ಸುಬ್ಬರಾವ್, ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಚಿದಂಬರಂ ತಿಳಿಸಿದ್ದಾರೆ. |