ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ ಚರ್ಚೆ ನಡೆಸಿ ಬಡ್ಡಿ ದರ ಕಡಿತಗೊಳಿಸುವಂತೆ ಸಲಹೆ ನೀಡಿದ್ದರಿಂದ, ದೇಶದ ಪ್ರಮುಖ ಬ್ಯಾಂಕ್‌ಗಳಾದ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ ಮತ್ತು ಬ್ಯಾಂಕ್ ಆಫ್ ಬರೋಡಾ ಸಾಲದ ಮೇಲಿನ ಬಡ್ಡಿ ದರವನ್ನು ಶೇ.0.75 ರಷ್ಟು ಕಡಿತಗೊಳಿಸಿವೆ.
ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೆನರಾ ಬ್ಯಾಂಕ್ ಶೇ.0.5 ರಷ್ಟು ಠೇವಣಿ ಮೇಲಿನ ಬಡ್ಡಿ ದರವನ್ನು ಕಡಿತಗೊಳಿಸಿದ್ದು, ಡಿಸೆಂಬರ್ 1 ರಿಂದ ಜಾರಿಗೆ ಬರಲಿದೆ. ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ನವೆಂಬರ್ 10 ರಿಂದ ಬಡ್ಡಿ ದರ ಕಡಿತ ಜಾರಿಗೆ ಬರಲಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಬ್ಯಾಂಕ್ ಆಫ್ ಬರೋಡಾ ಬಡ್ಡಿ ದರ ಕಡಿತದ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಗೃಹ ಸಾಲಗಳಿಗೆ ಬಡ್ಡಿ ದರ ಕಡಿಮೆಯಿರುವುದರಿಂದ ಮತ್ತೆ ಬಡ್ಡಿ ದರ ಕಡಿತ ಅನ್ವಯಿಸುವುದಿಲ್ಲ ಎಂದು ವಿ.ಶಾಂತನ್‌ರಾಮನ್ ತಿಳಿಸಿದ್ದಾರೆ. |