ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಜನವರಿಯಿಂದ ವಿಮಾನ ದರದಲ್ಲಿ ಇಳಿಕೆ -ಪಟೇಲ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜನವರಿಯಿಂದ ವಿಮಾನ ದರದಲ್ಲಿ ಇಳಿಕೆ -ಪಟೇಲ್
ಕಳೆದ ಕೆಲ ತಿಂಗಳುಗಳಿಂದ ವಿಮಾನ ಪ್ರಯಾಣ ದರದಲ್ಲಿ ಹೆಚ್ಚಳವನ್ನು ಎದುರಿಸುತ್ತಿರುವ ಗ್ರಾಹಕರಿಗೆ, ಪ್ರಸ್ತುತ ಇಂಧನ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಮುಂಬರುವ ವರ್ಷದ ಆರಂಭದಲ್ಲಿ ಪ್ರಯಾಣ ದರ ಇಳಿಕೆಯಾಗಲಿದೆ ಎಂದು ಕೇಂದ್ರ ವಿಮಾನಯಾನ ಖಾತೆ ಸಚಿವ ಪ್ರಫುಲ್ ಪಟೇಲ್ ಹೇಳಿದ್ದಾರೆ.

ಡಿಸೆಂಬರ್ ತಿಂಗಳ ಅವಧಿಯಲ್ಲಿ ಇಂಧನದ ಮೇಲಿನ ತೆರಿಗೆಯನ್ನು ತರ್ಕಸಮ್ಮತವಾಗಿ ಹೇರುವ ಸಾಧ್ಯತೆಗಳಿರುವುದರಿಂದ ಮುಂದಿನ ತಿಂಗಳಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರಲಿದ್ದು, ಜನೆವರಿಯಿಂದ ವಿಮಾನ ಪ್ರಯಾಣ ದರಗಳು ಇಳಿಕೆಯಾಗಲಿವೆ ಎಂದು ಸಚಿವ ಪ್ರಫುಲ್ ಪಟೇಲ್ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಮನಮೋಹನ್‌ಸಿಂಗ್, ಸಚಿವ ಸಂಪುಟದ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯೊಂದು ರಚಿಸಿದ್ದಾರೆ. ಸಮಿತಿ ಮುಂದಿನ ವಾರ ಮಂಗಳವಾರದಂದು ಸಭೆಯನ್ನು ನಡೆಸಲಿದ್ದು,ಸಭೆಯಲ್ಲಿ ಇಂಧನ ತೆರಿಗೆ ಕುರಿತಂತೆ ಪ್ರಮುಖವಾಗಿ ಚರ್ಚೆಗೆ ಬರಲಿರುವುದರಿಂದ ವೈಮಾನಿಕ ಸಂಸ್ಥೆಗಳಿಗೆ ಹೆಚ್ಚಿನ ನೆಮ್ಮದಿ ದೊರೆಯಲಿದೆ ಎಂದು ಸಚಿವ ಪಟೇಲ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಇಂಧನ ತೆರಿಗೆ ರದ್ದು: ಏರ್‌ಏಷ್ಯಾ ಸಂಸ್ಥೆಯ ಸಾಧನೆ
ತೆರಿಗೆ ಸಂಗ್ರಹದಲ್ಲಿ ಶೇ.5ರಷ್ಟು ಇಳಿಕೆ
ತೈಲ: ಪ್ರತಿ ಬ್ಯಾರೆಲ್‌ಗೆ 55 ಡಾಲರ್‌
ಆರ್ಥಿಕ ಕುಸಿತದಿಂದ ಪ್ರವಾಸೋದ್ಯಮಕ್ಕೆ ಧಕ್ಕೆಯಿಲ್ಲ
ಸ್ಥಿರ ಠೇವಣಿಗಳ ಬಡ್ಡಿ ದರ ಕಡಿತ
ಸಾಗರೋತ್ತರ ಕಂಪೆನಿಗಳ ಸ್ವಾಧೀನಕ್ಕೆ ಟಾಟಾ ತಡೆ