ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಆರ್ಥಿಕ ಬಿಕ್ಕಟ್ಟು : ಪ್ರಧಾನಿ ಗವರ್ನರ್ ಚರ್ಚೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆರ್ಥಿಕ ಬಿಕ್ಕಟ್ಟು : ಪ್ರಧಾನಿ ಗವರ್ನರ್ ಚರ್ಚೆ
ಆರ್ಥಿಕ ಗೊಂದಲವನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಮನಮೋಹನ್‌ಸಿಂಗ್ ನೇತೃತ್ವದ ಸಮಿತಿ, ರಿಸರ್ವ್ ಬ್ಯಾಂಕ್‌ ಗವರ್ನರ್ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ನಗದು ಹಣದ ಹರಿವು ಹೆಚ್ಚಳ ಕುರಿತಂತೆ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಆರ್‌ಬಿಐ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ತೆಗೆದುಕೊಂಡ ಕ್ರಮಗಳು ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ನಗದು ಹಣದ ಹರಿವು ಹೆಚ್ಚಳಕ್ಕಾಗಿ ರೆಪೊ ಮತ್ತು ರಿವರ್ಸ್ ರೆಪೊ ದರಗಳ ಜಾರಿ ಕುರಿತಂತೆ ಚರ್ಚಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಖಾತೆ ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ.

ದೇಶದ ಆರ್ಥಿಕ ಸ್ಥಿತಿಗತಿಯ ಕುರಿತಂತೆ ಸರಕಾರಕ್ಕೆ ಸಂಪೂರ್ಣ ಮಾಹಿತಿಯಿದ್ದು, ಪ್ರಧಾನಿ ಮನಮೋಹನ್‌ ಸಿಂಗ್ ಸ್ವತಃ ಮೇಲ್ವಿಚಾರಣೆ ನಡೆಸುತ್ತಿರುವುದರಿಂದ ಅತಿ ಶೀಘ್ರದಲ್ಲಿ ಸೂಕ್ತ ನಿರ್ಣಯಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ , ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಮತ್ತು ಆರ್‌ಬಿಐ ಗವರ್ನರ್ ಡಿ.ಸುಬ್ಬಾರಾವ್ ಉಪಸ್ಥಿತರಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆರ್ಥಿಕ ಬಿಕ್ಕಟ್ಟು ಶೀಘ್ರ ಅಂತ್ಯ-ಚಿದಂಬರಂ
ಮಾರುಕಟ್ಟೆಯಲ್ಲಿ ಹೂಡಿಕೆಗೆ ಪ್ರಶಸ್ತ ಸಮಯ : ಕುರಿಯನ್
ಇಂಧನ ಮಾರಾಟ ತೆರಿಗೆ: ರಾಜ್ಯಗಳಿಗೆ ಸಲಹೆ
25 ಸಾವಿರ ಉದ್ಯೋಗಿಗಳ ನೇಮಕ: ಇನ್ಫೋಸಿಸ್
ಎಸ್‌ಬಿಐ:25ಸಾವಿರ ಉದ್ಯೋಗಿಗಳ ನೇಮಕ
ಆರ್ಥಿಕ ಸುಧಾರಣೆಗೆ ಆರು ತಿಂಗಳು ಅಗತ್ಯ :ಚಿದಂಬರಂ