ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೆಲ ಕ್ಷೇತ್ರಗಳಿಗೆ ವಿಶೇಷ ಆದ್ಯತೆಯನ್ನು ನೀಡುವುದು ಅಗತ್ಯವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ ಹೇಳಿದ್ದಾರೆ. ವಿಶೇಷ ಕ್ಷೇತ್ರಗಳಿಗೆ ಅದ್ಯತೆಯನ್ನು ನೀಡುವ ಕುರಿತಂತೆ ಅಧ್ಯಯನ ನಡೆಸಲಾಗುತ್ತಿದ್ದು, ಪ್ರತಿಯೊಂದು ಕ್ಷೇತ್ರದ ಅಗತ್ಯಕ್ಕೆ ಅನುಗುಣವಾಗಿ ಸೂಕ್ತ ಸಲಹೆಗಳನ್ನು ನೀಡಿದಲ್ಲಿ ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ
ಜವಳಿ, ರಿಯಲ್ ಎಸ್ಟೇಟ್, ಮ್ಯೂಚುವಲ್ ಫಂಡ್ಸ್, ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ, ಎನ್‌ಬಿಎಫ್‌ಸಿ ಸೂಕ್ತ ಸಲಹೆಗಳನ್ನು ನೀಡುತ್ತಿದೆ ಎಂದು ಸಚಿವ ಚಿದಂಬರಂ ವಿವರಿಸಿದರು. ಜಾಗತಿಕ ಆರ್ಥಿಕತೆಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರಗಳು ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ವಿತ್ತ ಸಚಿವಾಲಯ, ಉಕ್ಕು, ಸ್ಟೀಲ್ ಉತ್ಪನ್ನ, ಸೋಯಾಬಿನ್ ತೈಲಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದ ನಂತರ ಸಚಿವ ಚಿದಂಬರಂ ಹೇಳಿಕೆ ಹೊರಬಿದ್ದಿದೆ.
ವಿಭಿನ್ನ ಕ್ಷೇತ್ರಗಳಿಗೆ ಆದ್ಯತೆ ನೀಡುವ ಸಂದರ್ಭದಲ್ಲಿ ಕೇಂದ್ರದ ಸಚಿವರುಗಳ ಬೇಡಿಕೆ ಹಾಗೂ ಇಲಾಖೆಗಳು ಮಾಡಬೇಕಾದ ವೆಚ್ಚವನ್ನು ಗಮನದಲ್ಲಿಟ್ಟುಕೊಂಡು ಅಂತಿಮಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ ಹೇಳಿದ್ದಾರೆ. |