ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಡುವೆ ಭಾರತ ಶೇ.8ರಷ್ಟು ಅಭಿವೃದ್ಧಿ ದರವನ್ನು ಕಾಪಾಡಿಕೊಂಡು ಬರಲಿದೆ ಎಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಹೇಳಿದ್ದಾರೆ. ನಮಗೆ ಶೇ.8ರಷ್ಟು ಅಭಿವೃದ್ಧಿ ದರವನ್ನು ಕಾಯ್ದುಕೊಂಡು ಬರುವ ಸಾಮರ್ಥ್ಯವಿರುವುದರಿಂದ. ನಾವು ಮುಂದುವರಿಸಿಕೊಂಡು ಹೋಗುತ್ತೆವೆ ಎಂದು ಪ್ರಧಾನಿ ಮನಮೋಹನ್‌ಸಿಂಗ್ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಷಿಪ್ ಶೃಂಗಸಭೆಯಲ್ಲಿ ತಿಳಿಸಿದ್ದಾರೆ.
ಸಂಪನ್ಮೂಲಗಳು ಹಾಗೂ ಬುದ್ದಿವಂತಿಕೆಯಿಂದ ಹೋರಾಟ ಮಾಡಿ ಸಾರ್ವಜನಿಕ ನಿಯಮಗಳಾದ ಆರ್ಥಿಕ ,ದೇಶದ ಆದಾಯ, ಸಾರ್ವಜನಿಕ ಹೂಡಿಕೆ ಮತ್ತು ವಿದೇಶಿ ವಿನಿಮಯ ಮಾರುಕಟ್ಟೆಗಳನ್ನು ಆರ್ಥಿಕ ಬಿಕ್ಕಟ್ಟು ನಿವಾರಣೆಗಾಗಿ ನಿಯೋಗಿಸಲಾಗುವುದು ಎಂದು ತಿಳಿಸಿದ್ದಾರೆ.
ಜಾಗತಿಕ ಆರ್ಥಿಕತೆ ನೀರಿನ ಮೇಲಿರುವ ಚಿಕ್ಕ ಅಲೆಗಳಿಂದ ಕೂಡಿದೆ.ನಮಗೆ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರುವ ಸಂಪೂರ್ಣ ವಿಶ್ವಾಸವಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ.
ಶೃಂಗಸಭೆಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಪ್ರಧಾನಿ, ಜಾಗತಿಕ ಆರ್ಥಿಕತೆ ನಿಧಾನಗತಿಗೆ ಬರುವುದನ್ನು ನಿರೀಕ್ಷಿಸಲಾಗುತ್ತಿದೆ. ಬಜೆಟ್‌ನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ. |