ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಎಸ್‌ಬಿಐ: 4280 ಉದ್ಯೋಗಿಗಳ ನೇಮಕ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಸ್‌ಬಿಐ: 4280 ಉದ್ಯೋಗಿಗಳ ನೇಮಕ
ದೇಶದ ಬ್ಯಾಕಿಂಗ್ ಕ್ಷೇತ್ರದಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ,25 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಿಸಿದ ಕೆಲವೇ ದಿನಗಳ ನಂತರ ಮತ್ತೆ 4,200 ಉದ್ಯೋಗಿಗಳನ್ನು ನೇಮಕ ಮಾಡುವುದಾಗಿ ಪ್ರಕಟಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ದೇಶದಾದ್ಯಂತವಿರುವ ಶಾಖೆಗಳಿಗೆ 4280 ಗುಮಾಸ್ತ ಹುದ್ದೆಗಳನ್ನು ನೇಮಕ ಮಾಡಲು ಬ್ಯಾಂಕ್‌ನ ಅಡಳಿತ ಮಂಡಳಿ ನಿರ್ಧರಿಸಿದೆ ಎಂದು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸಕ್ತ ಆರ್ಥಿಕ ಸಾಲಿನ ನವೆಂಬರ್ ತಿಂಗಳಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ 25 ಸಾವಿರ ಹುದ್ದೆಗಳನ್ನು ತುಂಬುವುದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಣೆ ಹೊರಡಿಸಿತ್ತು. ಆದರೆ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಕರಿನೆರಳು ನಿಧಾನವಾಗಿ ಕಣ್ಮರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲಸದ ಒತ್ತಡವನ್ನು ನಿಭಾಯಿಸಲು ಮತ್ತೆ 4280 ಉಜ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.

ಸ್ಟೇಟ್ ಬ್ಯಾಂಕ್ ಆಫ್ ಬಿಕೇನರ್, ಸ್ಟೇಟ್‌ ಬ್ಯಾಂಕ್ ಆಫ್ ಹೈದ್ರಾಬಾದ್ ,ಸ್ಟೇಟ್‌ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್‌ ಬ್ಯಾಂಕ್ ಆಫ್ ಪಟಿಯಾಲಾ, ಸ್ಟೇಟ್‌ ಬ್ಯಾಂಕ್ ಆಫ್ ಇಂದೋರ್,ಸ್ಟೇಟ್‌ ಬ್ಯಾಂಕ್ ಆಫ್ ಟ್ರಾವನ್‌ಕೊರ್, ಸ್ಟೇಟ್‌ ಬ್ಯಾಂಕ್ ಆಫ್ ಜೈಪುರ್‌ಗಳ ಶಾಖೆಗಳಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಬ್ಯಾಂಕ್‌ನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಬಿಕೇನರ್, ಸ್ಟೇಟ್‌ ಬ್ಯಾಂಕ್ ಆಫ್ ಹೈದ್ರಾಬಾದ್ ,ಸ್ಟೇಟ್‌ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್‌ ಬ್ಯಾಂಕ್ ಆಫ್ ಪಟಿಯಾಲಾ, ಸ್ಟೇಟ್‌ ಬ್ಯಾಂಕ್ ಆಫ್ ಇಂದೋರ್,ಸ್ಟೇಟ್‌ ಬ್ಯಾಂಕ್ ಆಫ್ ಟ್ರಾವನ್‌ಕೊರ್, ಸ್ಟೇಟ್‌ ಬ್ಯಾಂಕ್ ಆಫ್ ಜೈಪುರ್‌ಗಳ ಶಾಖೆಗಳ ಪ್ರತಿ ಬ್ಯಾಂಕ್‌ಗಳಲ್ಲಿ 1 ಸಾವಿರ ಉದ್ಯೋಗಿಗಳ ಅಗತ್ಯತೆಯಿದೆ ಎಂದು ಹೇಳಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷ ಒ.ಪಿ.ಭಟ್ ನವೆಂಬರ್ 16 ರಂದು ಮಾತನಾಡಿ 20 ಸಾವಿರ ಗುಮಾಸ್ತ ಹುದ್ದೆಗಳು ಹಾಗೂ 5 ಸಾವಿರ ಸೂಪರ್‌ವೈಸರ್‌ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ ಎಂದು ಹೇಳಿರುವುದನ್ನು ಸ್ಮರಿಸಬಹುದು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬ್ಯಾಂಕಾಕ್: ವಿಮಾನ ನಿಲ್ದಾಣ ಕಾರ್ಯಾರಂಭ
ಮುಂಬೈ ಮತ್ತಷ್ಟು ಪ್ರಬಲವಾಗಲಿದೆ: ಉದ್ಯಮಿಗಳು
ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ
ಎಸ್‌ಬಿಐಗೆ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿ
9200 ನೌಕರರನ್ನು ವಜಾ ಮಾಡಲಿರುವ ಮೋರ್ಗನ್
ರೂಪಾಯಿ ಬೆಲೆ 25 ಪೈಸೆ ಕುಸಿತ