ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > 90 ದಿನಗಳಲ್ಲಿ 65 ಸಾವಿರ ಉದ್ಯೋಗಿಗಳಿಗೆ ಅರ್ಧಚಂದ್ರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
90 ದಿನಗಳಲ್ಲಿ 65 ಸಾವಿರ ಉದ್ಯೋಗಿಗಳಿಗೆ ಅರ್ಧಚಂದ್ರ
ದೇಶದ ಆರ್ಥಿಕತೆ ಕುಸಿತದ ಹಿನ್ನೆಲೆಯಲ್ಲಿ ಅಕ್ಟೋಬರ್‌ ತಿಂಗಳಿಗೆ ಅಂತ್ಯಗೊಂಡಂತೆ ಮೂರು ತಿಂಗಳ ಅವಧಿಯಲ್ಲಿ ಸುಮಾರು 65 ಉದ್ಯೋಗಿಗಳನ್ನು ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಅಗೋಸ್ಟ್‌ ತಿಂಗಳಿನಿಂದ ಅಕ್ಟೋಬರ್‌ವರೆಗಿನ ಮೂರು ತಿಂಗಳ ಅವಧಿಯಲ್ಲಿ 21 ಕಂಪೆನಿಗಳ ಸಮೀಕ್ಷೆ ನಡೆಸಿದಾಗ ದೇಶದಾದ್ಯಂತ 65,507 ಉದ್ಯೋಗಿಗಳು ಉದ್ಯೋಗವನ್ನು ಕಳೆದುಕೊಂಡಿರುವುದು ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಕುಸಿತದಿಂದಾಗಿ, ಭಾರತದ ಉತ್ಪನ್ನಗಳಿಗೆ ಪ್ರಮುಖ ಮಾರುಕಟ್ಟೆಗಳಾದ ಅಮೆರಿಕ ಮತ್ತು ಯುರೋಪ್ ದೇಶಗಳ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ದೇಶದ 1,792 ಕೋಟಿ ರೂ.ಗಳ ರಫ್ತು ವಹಿವಾಟಿನಲ್ಲಿ ಕುಸಿತ ಕಂಡಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಜವಳಿ ಸಚಿವಾಲಯ ಪ್ರಾಯೋಜಿತ ಅಪರಲ್ ಎಕ್ಸ್‌ಪೋರ್ಟ್‌ ಪ್ರಮೋಷನ್ ಕೌನ್ಸಿಲ್ ಮಂಡಳಿ ವಿಭಿನ್ನ ರೀತಿಯಲ್ಲಿ ಸಮೀಕ್ಷೆ ನಡೆಸಿ, ಜವಳಿ ಕ್ಷೇತ್ರದಲ್ಲಿ ರಫ್ತು ವಹಿವಾಟು ನಡೆಸುವ ಘಟಕಗಳ ಸುಮಾರು 9 ಸಾವಿರ ಉದ್ಯೋಗಿಗಳು ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಸಮೀಕ್ಷೆಯೊಂದು ಪ್ರಕಟಿಸಿದೆ.

ದೇಶದಲ್ಲಿ ಕಳೆದ ಐದು ವರ್ಷಗಳ ರಫ್ತು ವಹಿವಾಟಿನಲ್ಲಿ ಪ್ರಥಮ ಬಾರಿಗೆ ಕುಸಿತ ಕಂಡಿದ್ದು, ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ರಫ್ತು ವಹಿವಾಟು ಶೇ 12ರಷ್ಟು ಕುಸಿತವಾಗಿ 12.8 ಬಿಲಿಯನ್ ಡಾಲರ್ ವಹಿವಾಟು ನಷ್ಟ ಅನುಭವಿಸಿದೆ ಎಂದು ರಫ್ತು ವಹಿವಾಟು ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ತೈಲ ದರ ಕುಸಿತ: ಪ್ರತಿ ಬ್ಯಾರೆಲ್‌ಗೆ 46 ಡಾಲರ್‌
31,500 ನೌಕರರ ವಜಾಗೆ ಜಿಎಂ ತೀರ್ಮಾನ
ಥೈಲ್ಯಾಂಡ್ ಬಿಕ್ಕಟ್ಟು : ಶೃಂಗಸಭೆ ಮುಂದೂಡಿಕೆ
ಆರ್ಥಿಕ ಕುಸಿತ ತಡೆಗೆ ಪ್ಯಾಕೇಜ್ ಘೋಷಣೆ :ಪ್ರಧಾನಿ
ಎಸ್‌ಬಿಐ: 4280 ಉದ್ಯೋಗಿಗಳ ನೇಮಕ
ಬ್ಯಾಂಕಾಕ್: ವಿಮಾನ ನಿಲ್ದಾಣ ಕಾರ್ಯಾರಂಭ