ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಟಾಟಾ ಮೋಟಾರ್ಸ್, ಮಹೀಂದ್ರಾ ಘಟಕಗಳು ಬಂದ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಟಾಟಾ ಮೋಟಾರ್ಸ್, ಮಹೀಂದ್ರಾ ಘಟಕಗಳು ಬಂದ್
ವಾಹನಗಳ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಅಟೋಮೊಬೈಲ್ ಕಂಪೆನಿಗಳಾದ ಟಾಟಾ ಮೋಟಾರ್ಸ್ ಲಿಮಿಟೆಡ್ ಮತ್ತು ಮಹೀಂದ್ರಾ ಆಂಡ್ ಮಹೀಂದ್ರಾ ಲಿಮಿಟೆಡ್ ಕಂಪೆನಿಗಳು ಡಿಸೆಂಬರ್ ತಿಂಗಳಲ್ಲಿ ಆರು ದಿನಗಳ ಅವಧಿಗೆ ಘಟಕಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿವೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ದೇಶದ ವಾಹನ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ ಪೂರ್ವ ಭಾರತದಲ್ಲಿರುವ ಘಟಕವನ್ನು ಮುಚ್ಚಲು ನಿರ್ಧರಿಸಿದೆ ಎಂದು ಕಂಪೆನಿಯ ವಕ್ತಾರರು ತಿಳಿಸಿದ್ದಾರೆ.

ಬಸ್ ಮತ್ತು ಟ್ರಕ್ ತಯಾರಿಕೆ ಕಂಪೆನಿಯಾದ ಟಾಟಾ ಮೋಟಾರ್ಸ್ , ನವೆಂಬರ್ ತಿಂಗಳ ಅವಧಿಯಲ್ಲಿ ಶೇ.30 ರಷ್ಟು ಬೇಡಿಕೆ ಕುಸಿದು,ಕೇವಲ 32,696 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

ವಾಹನಗಳ ಬೇಡಿಕೆ ಕುಸಿತದ ಹಿನ್ನೆಲೆಯಲ್ಲಿ ದೇಶದಲ್ಲಿರುವ ಮಹೀಂದ್ರಾ ಆಂಡ್ ಮಹೀಂದ್ರಾ ಘಟಕಗಳನ್ನು ಆರು ದಿನಗಳ ಅವಧಿಗೆ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಕಂಪೆನಿಯ ವಾಹನಗಳ ಬೇಡಿಕೆ ಕುಸಿದಿರುವದರಿಂದ ಘಟಕಗಳನ್ನು ಬಂದ್ ಮಾಡಲು ನಿರ್ಧರಿಸಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ಪರಿಸ್ಥಿತಿ ಸುಧಾರಿಸಬಹುದು ಎಂದು ಕಂಪೆನಿ ವಿಶ್ವಾಸ ವ್ಯಕ್ತಪಡಿಸಿದೆ

ಮಹೀಂದ್ರಾ ಕಂಪೆನಿ ರೆನಾಲ್ಟ್‌ನೊಂದಿಗಿನ ಜಂಟಿ ಸಹಭಾಗಿತ್ವದಲ್ಲಿ ಲೊಗಾನ್ ಸೆಡಾನ್ ವಾಹನಗಳನ್ನು ತಯಾರಿಸುತ್ತಿದ್ದು, ನವೆಂಬರ್ ತಿಂಗಳಲ್ಲಿ ವಾಹನ ಮಾರಾಟದಲ್ಲಿ ಶೇ.39 ರಷ್ಟು ಇಳಿಕೆ ಕಂಡಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾರು ತಯಾರಿಕೆ ಕಂಪೆನಿಗಳಿಗೆ ಸಾಲ ಮಂಜೂರು
ಜೆಟ್‌ಏರ್‌‌ವೇಸ್‌ನಿಂದ ಇಂಧನ ತೆರಿಗೆ ಕಡಿತ
ಪೆಟ್ರೋಲಿಯಂ ಉತ್ಪನ್ನಗಳ ದರ ಮತ್ತಷ್ಟು ಕಡಿತ ಸಾಧ್ಯತೆ?
ಉತ್ತೇಜನ ಪ್ಯಾಕೇಜ್ ಘೋಷಣೆ ಮುಂದಕ್ಕೆ
ಪೆಟ್ರೋಲ್‌, ಡೀಸೆಲ್ ದರಗಳಲ್ಲಿ ಕಡಿತ
ವೊಡಾಫೋನ್‌ನಿಂದ 10 ಸಾ.ಕೋಟಿ ಪಾವತಿ?