ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಆರ್ಥಿಕ ಅಭಿವೃದ್ಧಿ ದರ ಶೇ.7ರಷ್ಟಾಗಲಿದೆ: ಮೊಂಟೆಕ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆರ್ಥಿಕ ಅಭಿವೃದ್ಧಿ ದರ ಶೇ.7ರಷ್ಟಾಗಲಿದೆ: ಮೊಂಟೆಕ್
ಕೇಂದ್ರ ಸರಕಾರ ಪ್ಯಾಕೇಜ್ ಘೋಷಿಸಿದ ನಂತರ ಮಾತನಾಡಿದ ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ, ದೇಶದ ಆರ್ಥಿಕ ಅಭಿವೃದ್ಧಿ ದರ ಶೇ.7ರಷ್ಟು ತಲುಪುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಆರ್ಥಿಕ ಅಭಿವೃದ್ಧಿ ದರ ಶೇ.7ಕ್ಕೆ ಇಳಿಕೆಯಾದಲ್ಲಿ ದೇಶದ ಆರ್ಥಿಕತೆಗೆ ಉತ್ತಮ ಸಾಧನೆಯಾಗಿದೆ ಎನ್ನಬಹುದು ಶೇ.7ರ ಆರ್ಥಿಕ ದರದಿಂದ ಆರ್ಥಿಕತೆಯನ್ನು ನಿರ್ವಹಿಸಬಹುದಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

2007-08ರ ಆರ್ಥಿಕ ಸಾಲಿನಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ದರ ಶೇ.9ಕ್ಕೆ ತಲುಪಿತ್ತು.ಜಾಗತಿಕ ಆರ್ಥಿಕ ಕುಸಿತದಿಂದಾಗಿ ಜಗತ್ತಿನ ಅನೇಕ ರಾಷ್ಟ್ರಗಳು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವುದರಿಂದ ಆರ್ಥಿಕ ವೇಗದಲ್ಲಿ ನಿಧಾನವಾಗಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಅನುಮಾನ ವ್ಯಕ್ತಪಡಿಸಿದೆ.

ಮೂಲಸೌಕರ್ಯ, ಕಟ್ಟಡ ನಿರ್ಮಾಣ ಮತ್ತು ಗೃಹ ಕ್ಷೇತ್ರಗಳಿಗೆ ತೆರಿಗೆ ಕಡಿತ, ಆರ್ಥಿಕ ನೆರವನ್ನು ಪ್ರಧಾನಿ ಮನಮೋಹನ್‌ ಸಿಂಗ್ ಉತ್ತೇಜನ ಪ್ಯಾಕೇಜ್‌ನಲ್ಲಿ ಘೋಷಿಸಿರುವುದರಿಂದ ಆರ್ಥಿಕ ಅಭಿವೃದ್ಧಿ ದರ ಶೇ.7ರ ಗಡಿಯನ್ನು ತಲುಪಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಮೊಂಟೆಕ್ ತಿಳಿಸಿದ್ದಾರೆ.

ಪ್ಯಾಕೇಜ್ ಘೋಷಣೆಯಿಂದಾಗಿ ಜಾಗತಿಕ ಆರ್ಥಿಕ ಬಿಕ್ಕಟ್ಟು ದೇಶಧ ಮೇಲೆ ಅಲ್ಪ ಪರಿಣಾಮ ಬೀರಲು ಸಹಾಯಕವಾಗುತ್ತದೆ.ಕೇಂದ್ರ ಸರಕಾರ ಪರಿಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು, ಅಗತ್ಯವಾದಲ್ಲಿ ಮತ್ತಷ್ಟು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್‌ ಸಿಂಗ್ ಆಹ್ಲುವಾಲಿಯಾ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಣಕಾಸು, ಉದ್ಯಮ ಸಂಸ್ಥೆಗಳಿಗೆ 19 ಸಾ.ಕೋಟಿ ನಷ್ಟ
ಬಂಗಾರದ ಬೆಲೆಯಲ್ಲಿ ಮತ್ತೆ ಕುಸಿತ
ವಿಮಾನಯಾನ ದರ ಇಳಿಕೆ
ಆರ್‌ಬಿಐನಿಂದ ರೆಪೊ, ರಿವರ್ಸ್ ರೆಪೊ ದರ ಕಡಿತ
ಇಂಡಿಗೋ, ಕಿಂಗ್‌ಫಿಶರ್‌ನಿಂದ ಇಂಧನ ತೆರಿಗೆ ಕಡಿತ
ಟಾಟಾ ಮೋಟಾರ್ಸ್, ಮಹೀಂದ್ರಾ ಘಟಕಗಳು ಬಂದ್