ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಕಾರು, ದ್ವಿಚಕ್ರವಾಹನಗಳ ಮಾರಾಟದಲ್ಲಿ ಕುಸಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾರು, ದ್ವಿಚಕ್ರವಾಹನಗಳ ಮಾರಾಟದಲ್ಲಿ ಕುಸಿತ
ಪ್ರಸಕ್ತ ವರ್ಷದ ನವೆಂಬರ್ ತಿಂಗಳಿನಲ್ಲಿ ದೇಶಿಯ ಪ್ರಯಾಣಿಕ ಕಾರುಗಳ ಮಾರಾಟ, ಕಳೆದ ವರ್ಷದ ನವೆಂಬರ್ ತಿಂಗಳಿಗೆ ಹೋಲಿಸಿದಲ್ಲಿ ಶೇ.19.38 ರಷ್ಟು ಕುಸಿದಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ 1,03,031 ಕಾರುಗಳನ್ನು ಮಾರಾಟ ಮಾಡಲಾಗಿತ್ತು. ಆದರೆ ಪ್ರಸಕ್ತ ವರ್ಷದ ನವೆಂಬರ್ ತಿಂಗಳಿನಲ್ಲಿ ಕೇವಲ 83,059 ಕಾರುಗಳನ್ನು ಮಾರಾಟ ಮಾಡಲಾಗಿದೆ ಎಂದು ಸೂಸೈಟಿ ಆಫ್ ಇಂಡಿಯನ್ ಅಟೋಮೊಬೈಲ್ ಉತ್ಪಾದಕ ಸಂಘ ತಿಳಿಸಿದೆ.

ದ್ವಿಚಕ್ರವಾಹನಗಳ ಮಾರಾಟವನ್ನು ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ.20.24ರಷ್ಟು ಕುಸಿತವಾಗಿದ್ದು, ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 5,40,553 ವಾಹನಗಳನ್ನು ಮಾರಾಟ ಮಾಡಲಾಗಿತ್ತು.ಆದರೆ ಪ್ರಸಕ್ತ ವರ್ಷದ ನವೆಂಬರ್ ತಿಂಗಳಿನಲ್ಲಿ ಕೇವಲ 4,31.171 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಸೂಸೈಟಿ ಆಫ್ ಇಂಡಿಯನ್ ಅಟೋಮೊಬೈಲ್ ಉತ್ಪಾದಕ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ವಾಣಿಜ್ಯ ವಾಹನಗಳ ಮಾರಾಟವನ್ನು ಕಳೆದ ವರ್ಷದ ನವೆಂಬರ್ ತಿಂಗಳಿಗೆ ಹೋಲಿಸಿದಲ್ಲಿ ಶೇ.49.52 ಕುಸಿತವಾಗಿದ್ದು,ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 40,879 ವಾಹನಗಳನ್ನು ಮಾರಾಟ ಮಾಡಲಾಗಿತ್ತು.ಪ್ರಸಕ್ತ ವರ್ಷದ ನವೆಂಬರ್ ತಿಂಗಳಿನಲ್ಲಿ 20,637 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಸೂಸೈಟಿ ಆಫ್ ಇಂಡಿಯನ್ ಅಟೋಮೊಬೈಲ್ ಉತ್ಪಾದಕ ಸಂಘದ ಅಧ್ಯಕ್ಷರು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸೋನಿಯಿಂದ 8 ಸಾವಿರ ಹುದ್ದೆ ಕಡಿತ
ಆರ್ಥಿಕ ಅಶ್ವಾಸನೆಗಳು ವಂಚನೆಯ ತಂತ್ರ: ಆರ್ಥಿಕ ತಜ್ಞರು
ಪ್ರಸ್ತುತ ಆದಾಯ ತೆರಿಗೆಯಲ್ಲಿ ಕಡಿತವಿಲ್ಲ
ವಿತ್ತ ಸಚಿವ ಸ್ಥಾನ:ಕೃಷ್ಣ,ಸಿಬಲ್ ಮುಂಚೂಣಿಯಲ್ಲಿ
ಆರ್ಥಿಕ ಅಭಿವೃದ್ಧಿ ದರ ಶೇ.7ರಷ್ಟಾಗಲಿದೆ: ಮೊಂಟೆಕ್
ಹಣಕಾಸು, ಉದ್ಯಮ ಸಂಸ್ಥೆಗಳಿಗೆ 19 ಸಾ.ಕೋಟಿ ನಷ್ಟ