ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಶೀಘ್ರದಲ್ಲಿ ಬಡ್ಡಿ ದರ ಪರಿಶೀಲನೆ: ಎಸ್‌ಬಿಐ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶೀಘ್ರದಲ್ಲಿ ಬಡ್ಡಿ ದರ ಪರಿಶೀಲನೆ: ಎಸ್‌ಬಿಐ
ಕಳೆದ ವಾರ ಭಾರತೀಯ ರಿಸರ್ವ್ ಬ್ಯಾಂಕ್, ರೆಪೊ ಮತ್ತು ರಿವರ್ಸ್ ರೆಪೊ ದರಗಳನ್ನು ಕಡಿತಗೊಳಿಸಿದ ಹಿನ್ನೆಲೆಯಲ್ಲಿ, ಬಡ್ಡಿ ದರ ಕಡಿತ ಕುರಿತಂತೆ ಶೀಘ್ರದಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಿಸಿದೆ.

ಬಡ್ಡಿ ದರ ಕಡಿತ ಕುರಿತಂತೆ ಶೀಘ್ರದಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಎಸ್‌ಬಿಐ ಮುಖ್ಯಸ್ಥ ಒ.ಪಿ.ಭಟ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರ ಶೇ.6.5ರಷ್ಟು ಹಾಗೂ ರಿವರ್ಸ್ ರೆಪೊ ದರ ಶೇ.5 ರಷ್ಟು ಕಡಿತಗೊಳಿಸಿದ್ದು, ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಭಟ್ ತಿಳಿಸಿದ್ದಾರೆ.

ಆರ್‌ಬಿಐ ನಿರ್ಧಾರ ಪ್ರಕಟಗೊಂಡ ನಂತರ ಯೆಸ್ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಯುನಿಯನ್ ಬ್ಯಾಂಕ್‌ಗಳು 50 ರಷ್ಟು ಪಿಎಲ್‌ಆರ್ ದರ ಕಡಿತಗೊಳಿಸಿವೆ.

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ, ಕಳೆದ ತಿಂಗಳು 75ರಷ್ಟು ಪಿಎಲ್‌ಆರ್ ಬೇಸಿಕ್ ಪಾಯಿಂಟ್‌ಗಳನ್ನು ಕಡಿತಗೊಳಿಸಿ ಆದೇಶ ಹೊರಡಿಸಿತ್ತು.

ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್ ಸಭೆ ಮುಂದಿರುವಂತೆ ಆರ್ಥಿಕ ಪ್ಯಾಕೇಜ್ ಕುರಿತಂತೆ ಮಾತನಾಡಿದ ಎಸ್‌ಬಿಐ ಮುಖ್ಯಸ್ಥ ಒ.ಪಿ.ಭಟ್ ಸರಕಾರದಿಂದ ಇನ್ನಷ್ಟು ಆರ್ಥಿಕ ಪ್ಯಾಕೇಜ್‌ಗಳ ಘೋಷಣೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭಾರತದಲ್ಲಿ ಶೇ.3ರಷ್ಟು ಹುದ್ದೆ ಕಡಿತ: ಯಾಹೂ
60 ಸಾವಿರದವರೆಗೆ ವಾಹನಗಳ ದರ ಕಡಿತ:ಟಾಟಾ
ಬಿಪಿಒ ಕ್ಷೇತ್ರಗಳಲ್ಲಿ ಹುದ್ದೆಗಳ ಕಡಿತವಿಲ್ಲ:ನಾಸ್ಕಾಮ್
ಸ್ಕೊಡಾ ಕಾರು ದರಗಳಲ್ಲಿ 51 ಸಾವಿರ ಕಡಿತ
ಹಣದುಬ್ಬರ ಚಿಂತೆಗಳು ದೂರವಾಗಿಲ್ಲ; ಸೇನ್
ಫೋರ್ಡ್ ಇಂಡಿಯಾ ಕಾರುಗಳ ದರದಲ್ಲಿ ಕಡಿತ