ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > 2011-12ರ ವೇಳೆಗೆ ಉಕ್ಕು ಉತ್ಪಾದನೆ ದ್ವಿಗುಣ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
2011-12ರ ವೇಳೆಗೆ ಉಕ್ಕು ಉತ್ಪಾದನೆ ದ್ವಿಗುಣ
ದೇಶದ ಉಕ್ಕು ಉತ್ಪಾದನೆ ಮುಂಬರುವ 2011-12ರ ವೇಳೆಗೆ 124ಮಿಲಿಯನ್ ಟನ್‌ಗಳ ವಾರ್ಷಿಕ ಉತ್ಪಾದನೆ ದ್ವಿಗುಣವಾಗಲಿದೆ.2020ವೇಳೆಗೆ 280 ಮಿಲಿಯನ್ ಟನ್ ಉಕ್ಕು ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ ಎಂದು ಕೇಂದ್ರ ಉಕ್ಕು ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ರಾಜ್ಯಸಭೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದ ಪಾಸ್ವಾನ್, ಭಾರತ ಈ ಮೊದಲು ಉಕ್ಕು ಉತ್ಪಾದನೆಯಲ್ಲಿ ವಿಶ್ವದಲ್ಲಿ ಎಂಟನೇ ಸ್ಥಾನವನ್ನು ಪಡೆದಿದ್ದು, ಕೇಂದ್ರದಲ್ಲಿ ಯುಪಿಎ ಸರಕಾರ ಅಧಿಕಾರಕ್ಕೆ ಬಂದ ನಂತರ 54 ಮಿಲಿಯನ್ ಟನ್ ವಾರ್ಷಿಕ ಉಕ್ಕು ಉತ್ಪಾದಿಸಿ 5ನೇ ಸ್ಥಾನಕ್ಕೆ ಏರಿದೆ ಎಂದು ತಿಳಿಸಿದರು.

ದೇಶದ ಉಕ್ಕು ಪ್ರಾಧೀಕಾರ, ಮುಂಬರುವ 2020ವೇಳೆಗೆ 124ಮಿಲಿಯನ್ ಟನ್ ಉಕ್ಕು ಉತ್ಪಾದಿಸುವ ಗುರಿಯನ್ನು ಹೊಂದಲಾಗಿತ್ತು. ಆದರೆ ಯುಪಿಎ ಸರಕಾರ 2011-12ರ ವೇಳೆಗೆ 124 ಮಿಲಿಯನ್ ಟನ್ ಉಕ್ಕು ಉತ್ಪಾದಿಸುವ ಗುರಿಯನ್ನು ಹೊಂದಿದ್ದು, 2020ರ ವೇಳೆಗೆ 280 ಮಿಲಿಯನ್ ಟನ್ ಉಕ್ಕು ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

ಅತ್ಯುತ್ತಮ ಗುಣಮಟ್ಟದ ಕಬ್ಬಿಣದ ಅದಿರು ದೇಶದಲ್ಲಿ ಅಲ್ಪ ಪ್ರಮಾಣದಲ್ಲಿರುವುದರಿಂದ ರಫ್ತು ವಹಿವಾಟಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.

ಉಕ್ಕು ಉದ್ಯಮದಲ್ಲಿ ಸುಮಾರು 5 ಲಕ್ಷ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಸಂಪೂರ್ಣವಾಗಿ ನಿಲ್ಲಿಸಲಾಗದು. ಇದರಿಂದ ಉದ್ಯೋಗಿಗಳ ಜೀವನ ನಿರ್ವಹಣೆ ಮತ್ತು ಆದಾಯ ಸಂಕಷ್ಟಕ್ಕೆ ಸಿಲುಕುತ್ತದೆ ಎಂದು ಸಚಿವ ಪಾಸ್ವಾನ್ ಅಭಿಪ್ರಾಯಪಟ್ಟರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೈಗಾರಿಕಾ ಅಭಿವೃದ್ಧಿಯಲ್ಲಿ ಶೇ.3.4ರಷ್ಟು ಕುಸಿತ
ಸ್ಯಾಮ್‌ಸಂಗ್‌ನಿಂದ 10 ಸಾವಿರದವರೆಗೆ ದರ ಕಡಿತ
ಜಿಎಸ್‌ಎಂ ಗ್ರಾಹಕರ ಸಂಖ್ಯೆ 7 ಮಿಲಿಯನ್
ಮುಂದಿನ ವಾರದಲ್ಲಿ 2ನೇ ಪ್ಯಾಕೇಜ್ ಘೋಷಣೆ
ಮತ್ತಷ್ಟು ಇಳಿಕೆಯಾದ ಹಣದುಬ್ಬರ ದರ
ಶೀಘ್ರದಲ್ಲಿ ಬಡ್ಡಿ ದರ ಪರಿಶೀಲನೆ: ಎಸ್‌ಬಿಐ