ಜಾಗತಿಕ ಆರ್ಥಿಕ ಕುಸಿತದಿಂದಾಗಿ ಕಾರುಗಳ ಮಾರಾಟದಲ್ಲಿ ಕುಸಿತ ಎದುರಾಗಿದ್ದರಿಂದ ಉತ್ಪಾದನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಮಾರುತಿ ಸುಝುಕಿ ಕಂಪೆನಿಯ ಮೂಲಗಳು ತಿಳಿಸಿವೆ.
ಕಳೆದ ನವೆಂಬರ್ ತಿಂಗಳಿಗೆ ಹೋಲಿಸಿದಲ್ಲಿ ಕಾರುಗಳ ಮಾರಾಟ ಶೇ.24 ರಷ್ಟು ಕುಸಿತ ಕಂಡಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಅಟೋಮೊಬೈಲ್ ಮಾರುಕಟ್ಟೆ ಶೀಘ್ರದಲ್ಲಿ ಏರಿಕೆ ಕಾಣದಿದ್ದಲ್ಲಿ ಕಾರುಗಳ ತಯಾರಿಕೆಯನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗುತ್ತದೆ ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತ, ಚೀನಾ ಅಮೆರಿಕ ಸೇರಿದಂತೆ ಬಹುತೇಕ ರಾಷ್ಟ್ರಗಳಲ್ಲಿ ವಾಹನೋದ್ಯಮ ಭಾರಿ ಪ್ರಮಾಣದ ಕುಸಿತವನ್ನು ಎದುರಿಸುತ್ತಿದೆ ಎಂದು ಕಂಪೆನಿಯ ಅಧಿಕಾರಿಗಳು ತಿಳಿಸಿದ್ದಾರೆ. |