ಜಾಗತಿಕ ಆರ್ಥಿಕ ಕುಸಿತದಿಂದಾಗಿ ರಫ್ತು ಆಧಾರಿತ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವಹಿವಾಟಿನಲ್ಲಿ ಭಾರಿ ಕುಸಿತ ಕಾಣಲಿರುವುದರಿಂದ ಮುಂಬರುವ ಆರು ತಿಂಗಳಲ್ಲಿ 50 ಸಾವಿರ ಸಾಫ್ಚ್‌ವೇರ್ ಉದ್ಯೋಗಿಗಳು ಉದ್ಯೋಗವನ್ನು ಕಳೆದುಕೊಳ್ಳಲಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆಯೊಂದು ಸಮೀಕ್ಷೆ ನಡೆಸಿ ವರದಿ ಪ್ರಕಟಿಸಿದೆ.
ಮಾಹಿತಿ ತಂತ್ರಜ್ಞಾನ ಮತ್ತು ಬಿಪಿಒ ಕ್ಷೇತ್ರಗಳಲ್ಲಿ 50 ಸಾವಿರ ಉದ್ಯೋಗಿಗಳು ಉದ್ಯೋಗವನ್ನು ಕಳೆದುಕೊಳ್ಳಲಿದ್ದಾರೆ ಎಂದು ಯುಎನ್‌ಐಟಿಇಎಸ್ ಇಂಡಿಯಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಶೇಖರ್ ಹೇಳಿದ್ದಾರೆ.
ಸೆಪ್ಟೆಂಬರ್‌ದಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ, ದೇಶದ ಮಾಹಿತಿ ತಂತ್ರಜ್ಞಾನ ಮತ್ತು ಬಿಪಿಒ ಕ್ಷೇತ್ರಗಳಲ್ಲಿ ಸುಮಾರು 10 ಸಾವಿರ ಉದ್ಯೋಗಿಗಳು ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಶೇಖರ್ ತಿಳಿಸಿದ್ದಾರೆ. |