ಕೇಂದ್ರ ಸರಕಾರ 3ಜಿ ಸ್ಪೆಕ್ಟ್ರಂ ಹರಾಜಿನಲ್ಲಿ ಪಾಲ್ಗೊಳ್ಳಲು ಅರ್ಜಿಗಳನ್ನು ಸ್ವೀಕರಿಸುವ ದಿನಾಂಕವನ್ನು ಜನೆವರಿ 5 ರಿಂದ ಜನೆವರಿ 20ಕ್ಕೆ ಮುಂದೂಡಿದೆ ಎಂದು ಟೆಲಿಕಾಂ ಮೂಲಗಳು ತಿಳಿಸಿವೆ.
ಕಳೆದ ಡಿಸೆಂಬರ್ 23 ರಂದು ನಡೆದ ಸಭೆಯಲ್ಲಿ ಟೆಲಿಕಾಂ ಕಂಪೆನಿಗಳ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು 3ಜಿ ಸ್ಪೆಕ್ಟ್ರಂ ಹರಾಜಿಗಾಗಿ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕವನ್ನು ಮಂದೂಡಲಾಗಿದೆ ಎಂದು ಟೆಲಿಕಾಂ ಅಧಿಕಾರಿಗಳು ತಿಳಿಸಿದ್ದಾರೆ
ಕ್ರಿಸ್‌ಮಸ್ ರಜೆ ಹಾಗೂ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ವಿದೇಶಿ ಕಂಪೆನಿಗಳು ಬಿಡ್‌ನಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ, ವಿದೇಶಿ ಕಂಪೆನಿಗಳಿಗೆ ಅವಕಾಶ ನೀಡಲು ಕೇಂದ್ರ ಸರಕಾರ 3ಜಿ ಸ್ಪೆಕ್ಟ್ರಂ ಹರಾಜನ್ನು ಮುಂದೂಡಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. |