ಸತ್ಯಂ ಮುಖ್ಯಸ್ಥ ಬಿ.ರಾಮಲಿಂಗಾರಾಜು 7 ಸಾವಿರ ಕೋಟಿ ರೂಪಾಯಿಗಳ ವಂಚನೆ ನಡೆಸಿರುವುದಾಗಿ ಒಪ್ಪಿಕೊಂಡ ಒಂದು ದಿನದ ನಂತರ, ಸತ್ಯಂ ಕಂಪ್ಯೂಟರ್ಸ್ ಸಂಸ್ಥೆಯ ವ್ಯವಸ್ಥಾಪನಾ ಮಂಡಳಿಯಿಂದ ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಟಿ ಕರೆಯಲಾಗಿದೆ ಎಂದು ಮಹಿಳಾ ವಕ್ತಾರರು ಹೇಳಿದ್ದಾರೆ. ಮಧ್ಯಂತರ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಮ್ ಮೈನಾಮಪತಿ ಹಾಗೂ ಹಿರಿಯ ವ್ಯವಸ್ಥಾಪಕ ಮಂಡಳಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಹಿಳಾ ವಕ್ತಾರರು ತಿಳಿಸಿದ್ದಾರೆ. |