ಪ್ರಸಕ್ತ ವರ್ಷದ ಆರ್ಥಿಕ ಸಾಲಿನಲ್ಲಿ ಜಾಗತಿಕ ಆರ್ಥಿಕ ಕುಸಿತದ ಮಧ್ಯೆಯ ದೇಶದ ಆರ್ಥಿಕ ಅಭಿವೃದ್ಧಿ ದರ ಶೇ.7 ರಷ್ಟಾಗಲಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.ಏಷ್ಯಾದ ಮೂರನೇ ಬಲಾಢ್ಯ ಆರ್ಥಿಕ ರಾಷ್ಟ್ರವಾದ ಭಾರತ ಕಳೆದ ನಾಲ್ಕು ವರ್ಷಗಳಿಂದ ನಿರಂತರ ಶೇ.9 ರಷ್ಟು ಅಭಿವೃದ್ಧಿ ದರವನ್ನು ಹೊಂದಿದ್ದು, ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಡುವೆ ಸೆಪ್ಟೆಂಬರ್ ತೈಮಾಸಿಕದಲ್ಲಿ ಶೇ.7.6 ರಷ್ಟು ಆರ್ಥಿಕ ಅಭಿವೃದ್ಧಿಯಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ದೇಶದ ಆರ್ಥಿಕತೆ ಸದೃಢವಾಗಿರುವುದರಿಂದ ಜಾಗತಿಕ ಆರ್ಥಿಕ ಕುಸಿತದ ಮಧ್ಯೆಯು ಶೇ. 7 ರಷ್ಟು ಆರ್ಥಿಕ ಅಭಿವೃದ್ಧಿಯ ಗುರಿಯನ್ನು ತಲುಪುವ ಗುರಿಯನ್ನು ಹೊಂದಲಾಗಿದೆ. ಶೇ.7 ರ ಅಭಿವೃದ್ಧಿ ದರ ಜಾಗತಿಕ ಮಟ್ಟದಲ್ಲಿ ಅತ್ಯುತ್ತಮ ಅಭಿವೃದ್ಧಿ ದರವಾಗಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಚೆನ್ನೈನಲ್ಲಿ ಹೇಳಿದ್ದಾರೆ. ಆರ್ಥಿಕ ತಜ್ಞರು , ಸರಕಾರದ ಸಲಹೆಗಾರರು, ರಿಸರ್ವ್ ಬ್ಯಾಂಕ್ ಮುಖ್ಯಸ್ಥರು, ಅಧಿಕಾರಿಗಳು ಮುಂಬರುವ ವರ್ಷದಲ್ಲಿ ಆರ್ಥಿಕ ಅಬಿವೃದ್ಧಿ ದರ ಶೇ.7 ರಷ್ಟಾಗಲಿದೆ ಎಂದು ಮಾಹಿತಿ ನೀಡಿದ್ದಾಗಿ ಪ್ರಧಾನಿ ನುಡಿದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ಅಕ್ಟೋಬರ್ ತಿಂಗಳಿನಿಂದ 350 ಬೇಸಿಸ್ ಪಾಯಿಂಟ್‌ಗಳನ್ನು ಕಡಿತಗೊಳಿಸಿದ್ದು, ಸರಕಾರ ಉತ್ಪಾದಕ ವಸ್ತುಗಳ ಮೇಲೆ ತೆರಿಗೆ ಕಡಿತ ಮತ್ತು ಉತ್ತೇಜನ ಪ್ಯಾಕೇಜ್ ಘೋಷಿಸಿದ್ದು, ಆರ್ಥಿಕ ಅಭಿವೃದ್ಧಿ ದರ ಶೇ.7 ಕ್ಕೆ ತಲುಪುವ ಸಾಧ್ಯತೆಗಲಿವೆ ಎಂದು ಸರಕಾರಿ ಮೂಲಗಳು ತಿಳಿಸಿವೆ. |