ದೇಶದ ಎರಡನೇ ಬೃಹತ್ ಸಾಫ್ಟ್‌ವೇರ್ ರಫ್ತು ಸಂಸ್ಥೆ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ನಂದನ್ ನಿಲೇಕಣಿ, ಸತ್ಯಂ ಪತನವನ್ನು ಕಪ್ಪು ಚುಕ್ಕೆ ಎಂದು ಬಣ್ಣಿಸಿದ್ದು, ವಿವಾದದಿಂದಾಗಿ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಹಿನ್ನೆಡೆಯಾಗಿದೆ ಎಂದು ಹೇಳಿದ್ದಾರೆ.ಭಾರತದ ವಾಣಿಜ್ಯೋದ್ಯಮ ಮತ್ತು ಭಾರತದ ಕಾರ್ಪೋರೇಟ್ ಕ್ಷೇತ್ರ ಜಗತ್ತಿಗೆ ಮಾದರಿಯಾಗಿದ್ದು, ಸತ್ಯಂ ಘಟನೆ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ನಿಲೇಕಣಿ ಹೇಳಿದ್ದಾರೆ.ಕಳೆದ ಹಲವು ವರ್ಷಗಳಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಜಾಗತಿಕ ಸ್ಥರದಲ್ಲಿ ನಿಲ್ಲಿಸುವ ಪ್ರಯತ್ನಕ್ಕೆ ಹಿನ್ನೆಡೆಯಾಗಿದೆ ಎಂದು ನಂದನ್ ನಿಲೇಕಣಿ ಖಾಸಗಿ ಟಿ.ವಿ.ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. |