ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
PTI
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯಿಂದಾಗಿ ದೇಶಿಯ ಶೇರುಪೇಟೆ ಸೂಚ್ಯಂಕ ಕೂಡಾ ಏರಿಕೆಯಾಗುವ ನಿರೀಕ್ಷೆಯಲ್ಲಿ ಹೂಡಿಕೆದಾರರು, ಬ್ಯಾಂಕ್‌ಗಳು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 26 ಪೈಸೆ ಏರಿಕೆ ಕಂಡಿದೆ

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ 48.79 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 26 ಪೈಸೆ ಏರಿಕೆಯಾಗಿ ಪ್ರತಿ ಡಾಲರ್‌ಗೆ 49.03/05ರೂಪಾಯಿಗಳಿಗೆ ತಲುಪಿದೆ.

ಏಷ್ಯಾ ಶೇರುಪೇಟೆಗಳ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದರಿಂದ, ದೇಶಿಯ ಶೇರುಪೇಟೆ ವಹಿವಾಟಿನಲ್ಲಿ ಹೆಚ್ಚಳವಾಗಬಹುದು ಎನ್ನುವ ನಿರೀಕ್ಷೆಯಲ್ಲಿ ಬ್ಯಾಂಕ್‌ಗಳು ಹಾಗೂ ಹೂಡಿಕೆದಾರರು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ಫಾರೆಕ್ಸ್ ಮಾರುಕಟ್ಟೆಯ ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ.

ಏಷ್ಯಾ ಮಾರುಕಟ್ಟೆಗಳಾದ ಜಪಾನ್‌ನ ನಿಕೈ ಆರಂಭಿಕ ವಹಿವಾಟಿನಲ್ಲಿ ಶೇ.1.75ರಷ್ಟು ಏರಿಕೆ ಕಂಡಿದ್ದು, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆ ಶೇ.0.25 ರಷ್ಟು ಏರಿಕೆ ಕಂಡಿದೆ ಎಂದು ಮೂಲಗಳು ತಿಳಿಸಿವೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪ್ರೈಸ್ ‌ವಾಟರ್‌ನಿಂದ ಸತ್ಯಂಗೆ ತಪ್ಪು 'ಪಾನ್' ಸಂಖ್ಯೆ
ಉದ್ಯೋಗಿಗಳ ವೇತನ ಪಾವತಿಗೆ ಆದ್ಯತೆ:ಮನೋಹರನ್
2009ರಲ್ಲಿ ಚಿನ್ನದ ದರ ದಾಖಲೆಯ ಹೆಚ್ಚಳ ?
50 ಬ್ಯಾಂಕ್‌ ಖಾತೆಗಳನ್ನು ಹೊಂದಿದ್ದ ಸತ್ಯಂ ರಾಜು?
'ಸತ್ಯಂ'ಗೆ ನೆರವಿಲ್ಲ: ಸರಕಾರ
ನಾರ್ಟೆಲ್ ನೆಟ್‌ವರ್ಕ್ಸ್ ದಿವಾಳಿ