ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ಡಿಸೆಂಬರ್ 31ಕ್ಕೆ ಅಂತ್ಯಗೊಂಡ ಮೂರನೇ ತ್ರೈಮಾಸಿಕದಲ್ಲಿ ದಾಖಲಿಸಿದ ನಿವ್ವಳ ಲಾಭವು ಶೇ.52.89 ರಷ್ಟು ಏರಿಕೆ ಕಂಡು 701.50 ಕೋಟಿ ರೂ.ಗಳಿಗೆ ತಲುಪಿದೆ. 2007-08 ಹಣಕಾಸು ಸಾಲಿನ ಮೂರನೇ ತ್ರೈಮಾಸಿಕ ಅವಧಿಯಲ್ಲಿ ಅದು 458.83 ಕೋಟಿ ರೂ.ಗಳ ನಿವ್ವಳ ಲಾಭಗಳಿಸಿತ್ತು ಎಂದು ಮುಂಬೈ ಶೇರುಪೇಟೆಗೆ ಮಾಹಿತಿ ನೀಡಿದೆ. |