ಕಳಂಕಿತ ಸತ್ಯಂ ಸಂಸ್ಥಾಪಕ ರಾಮಲಿಂಗಾರಾಜು ಸಹೋದರ ಸಂಸ್ಥೆಯಾದ ಮೇತಾಸ್‌ಗೆ ನೀಡಲಾಗಿರುವ ಗುಲ್ಬರ್ಗಾ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣ ಗುತ್ತಿಗೆಯನ್ನು ರದ್ದುಗೊಳಿಸಿ ನೂತನ ಟೆಂಡರ್‌ಗಳನ್ನು ಕರೆಯಲು ಸರಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಮೇತಾಸ್ ಸಂಸ್ಥೆಗೆ ನೀಡಲಾದ ಟೆಂಡರ್‌ಗಳನ್ನು ರದ್ದುಗೊಳಿಸಿ ಮರು ಟೆಂಡರ್ ಕರೆಯಯುವಂತೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಗುಲ್ಬರ್ಗಾ ಹಾಗೂ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗಳಿಗಾಗಿ ಹೈದ್ರಾಬಾದ್ ಮೂಲದ ಮೇತಾಸ್,ನಾಗಾರ್ಜುನ್ ಕನ್ಸಟ್ರಕ್ಷನ್ ಕಾರ್ಪೋರೇಶನ್ ಮತ್ತು ವಿಯನ್ನಾ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಕಂಪೆನಿಗಳು ಜಾಗತಿಕ ಟೆಂಡರ್‌ನಲ್ಲಿ ಭಾಗವಹಿಸಿದ್ದವು.
ಪ್ರತಿಯೊಂದು ವಿಮಾನ ನಿಲ್ದಾಣ ಕಾಮಗಾರಿಗೆ 110 ಕೋಟಿ ರೂ.ನಿಗದಿಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ನಿರ್ಮಾಣ ಕಾಮಗಾರಿ ಆರಂಭಿಸಲು ನೂತನ ಟೆಂಡರ್‌ಗಳನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ ಯುಡಿಯೂರಪ್ಪ ತಿಳಿಸಿದ್ದಾರೆ.
ಗುರುವಾರದಂದು ನಡೆಯಲಿರುವ ಮೂಲಸೌಕರ್ಯ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಮೇತಾಸ್‌ಗೆ ನೀಡಿದ ಗುತ್ತಿಗೆಯನ್ನು ರದ್ದುಗೊಳಿಸಿ ಮರು ಟೆಂಡರ್ ಕರೆಯುವ ಬಗ್ಗೆ ಅಂತಿಮ ನಿರ್ದಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ತಿಳಿಸಿದ್ದಾರೆ. |