ಸರಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರೈಮ್ ಲೆಂಡಿಂಗ್ ದರದಲ್ಲಿ 50 ಬೇಸಿಸ್ ಪಾಯಿಂಟ್‌ಗಳನ್ನು ಕಡಿತಗೊಳಿಸಿದೆ ಎಂತದು ಬ್ಯಾಂಕ್ ಮೂಲಗಳು ತಿಳಿಸಿವೆ.
ಹೌಸಿಂಗ್, ಕಾರು ಸಾಲ, ಶಿಕ್ಷಣ ಸಾಲದ ಮೇಲಿನ ಬಡ್ಡಿ ದರವನ್ನು ಇಳಿಕೆ ಮಾಡಿದ್ದು, ಫೆಬ್ರವರಿ 1 ರಿಂದ ಅನ್ವಯವಾಗಲಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಮುಂದಿನ ತಿಂಗಳಿನಿಂದ ಅನ್ವಯವಾಗುವಂತೆ 50 ಬೇಸಿಸ್ ಪಾಯಿಂಟ್‌ಗಳ ಪ್ರೈಮ್ ಲೆಂಡಿಂಗ್ ದರವನ್ನು ಕಡಿತಗೊಳಿಸಲಾಗಿದೆ ಎಂದು ಪಂಜಾಬ್ ಆಂಡ್ ನ್ಯಾಷನಲ್ ಬ್ಯಾಂಕ್ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೆ.ಸಿ. ಚಕ್ರವರ್ತಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಗೃಹ ಸಾಲದ ಮೇಲೆ ಕೂಡಾ 50 ಬೇಸಿಸ್ ಪಾಯಿಂಟ್‌ಗಳನ್ನು ಕಡಿತಗೊಳಿಸಲು ಬ್ಯಾಂಕ್ ನಿರ್ಧರಿಸಿದೆ. ಕಾರು ಸಾಲ, ಶಿಕ್ಷಣ ಸಾಲ ಮತ್ತು ವ್ಯಯಕ್ತಿಕ ಸಾಲದ ಮೇಲಿನ ಬಡ್ಡಿ ದರಗಳು ಫೆಬ್ರವರಿ 1 ರಿಂದ ಇಳಿಕೆಯಾಗಲಿವೆ ಎಂದು ಬ್ಯಾಂಕ್ ಮುಖ್ಯಸ್ಥ ಚಕ್ರವರ್ತಿ ಹೇಳಿದ್ದಾರೆ. |