ದೇಶದ ಪ್ರಮುಖ ವಾಹನೋದ್ಯಮ ಸಂಸ್ಥೆ ಮಹೀಂದ್ರಾ ಆಂಡ್ ಮಹೀಂದ್ರಾ, ಡಿಸೆಂಬರ್ 31ಕ್ಕೆ ಅಂತ್ಯಗೊಂಡಂತೆ ನಿವ್ವಳ ಲಾಭಾಂಶದಲ್ಲಿ ಶೇ.99 ರಷ್ಟು ಕುಸಿತ ಕಂಡಿದೆ ಎಂದು ಮುಂಬೈ ಶೇರುಪೇಟೆಗೆ ನೀಡಿದ ಮಾಹಿತಿಯಲ್ಲಿ ಬಹಿರಂಗಪಡಿಸಿದೆ.
2006-07 ರ ಆರ್ಥಿಕ ಸಾಲಿನಲ್ಲಿ ಡಿಸೆಂಬರ್ ಅಂತ್ಯಕ್ಕೆ 4.05 ಬಿಲಿಯನ್ ಡಾಲರ್‌ಗಳ ನಿವ್ವಳ ಲಾಭ ಗಳಿಸಿದ್ದು ,2007-08ರ ಆರ್ಥಿಕ ಸಾಲಿನಲ್ಲಿ ಕೇವಲ 1.19 ಕೋಟಿ ರೂ. ಲಾಭ ಗಳಿಸಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಕಳೆದ ವರ್ಷದ ಆರ್ಥಿಕ ಸಾಲಿನಲ್ಲಿ 29.8 ಬಿಲಿಯನ್ ಡಾಲರ್‌ಗಳಿದ್ದ ಒಟ್ಟು ಆದಾಯ ಪ್ರಸಕ್ತ ವರ್ಷದ ಆರ್ಥಿಕ ಸಾಲಿನಲ್ಲಿ 25.62 ಬಿಲಿಯನ್ ಡಾಲರ್‌ಗಳಿಗೆ ಇಳಿಕೆಯಾಗಿದೆ ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಜಾಗತಿಕ ಆರ್ಥಿಕ ಕುಸಿತದಿಂದಾಗಿ ಗ್ರಾಹಕರ ಬೇಡಿಕೆಯಲ್ಲಿ ಕುಸಿತವಾಗಿ, ವಾಹನೋದ್ಯಮದ ಮೇಲೆ ಭಾರಿ ಪರಿಣಾಮ ಬೀರಿದೆ ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ, |