ನವದೆಹಲಿ : ಜಾಗತಿಕ ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ದೇಶದ ಅಭಿವೃದ್ಧಿ ಹಾಗೂ ಹುದ್ದೆಗಳ ನಷ್ಟವನ್ನು ತಡೆಯಲು ಕೇಂದ್ರ ಸರಕಾರ ಮತ್ತಷ್ಟು ಪ್ಯಾಕೇಜ್‌ಗಳನ್ನು ಘೋಷಿಸಲಿದೆ ಎಂದು ವಿತ್ತ ಖಾತೆಯನ್ನು ವಹಿಸಿಕೊಂಡಿರುವ ಕೇಂದ್ರ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ. ಆರ್ಥಿಕ ಬಿಕ್ಕಟ್ಟು ಮತ್ತಷ್ಟು ಆಳವಾದಲ್ಲಿ ಮುಂಬರುವ ವರ್ಷಧಲ್ಲಿ ದೇಶದ ಅಭಿವೃದ್ಧಿಗೆ ಮಾರಕವಾಗಲಿದೆ 2007-08ರ ಆರ್ಥಿಕ ಸಾಲಿನಲ್ಲಿ ಶೇ 9 ರಷ್ಟಿದ್ದ ಆರ್ಥಿಕ ಅಭಿವೃದ್ಧಿ ದರ ಪ್ರಸಕ್ತ ವರ್ಷದ ಆರ್ಥಿಕ ಸಾಲಿನಲ್ಲಿ ಶೇ.7 ಕ್ಕೆ ತಲುಪುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. |