ಸತ್ಯಂ ಹಗರಣವನ್ನು ಹಗುರವಾಗಿ ಪರಿಗಣಿಸಲಾಗುತ್ತಿದೆ ಎನ್ನುವ ಆರೋಪಕ್ಕೆ ಗುರಿಯಾದ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ನಿರ್ಧರಿಸಿದೆ ಎಂದು ಮುಖ್ಯ ಮಂತ್ರಿ ವೈ.ಎಸ್ ರಾಜಶೇಖರ್ ರೆಡ್ಡಿ ತಿಳಿಸಿದ್ದಾರೆ,
ಮುಖ್ಯಮಂತ್ರಿವೈ.ಎಸ್ ರಾಜಶೇಖರ್ ರೆಡ್ಡಿ ಪ್ರಕರಣ ಹೊರಬಂದ ಒಂದು ತಿಂಗಳ ನಂತರ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿದ್ದಾರೆ.
ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬುನಾಯ್ಡು ಸತ್ಯ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿರುವುದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರಾಕರಿಸುತ್ತಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವೈ.ಎಸ್ ರಾಜಶೇಖರ್ ರೆಡ್ಡಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ.
ರಾಜ್ಯ ಸರಕಾರ ಸತ್ಯಂ ಪ್ರಕರಣವನ್ನು ಈಗಾಗಲೇ ಸಿಬಿ, ಸಿಐಡಿ ತನಿಖೆಗೆ ವಹಿಸಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ. |