ಮುಂಬೈ : ದೇಶದ ಪ್ರಮುಖ ವಿಮಾನಯಾನ ಸಂಸ್ಥೆ ಏರ್ ಇಂಡಿಯಾಗೆ ಸರಕಾರದಿಂದ 4 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ದೊರೆಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಹೆಚ್ಚುವರಿ ಶೇರುಗಳು ಹಾಗೂ ದೀರ್ಘಾವಧಿ ಸಾಲದ ರೂಪದಲ್ಲಿ ನೀಡಲಾಗುವುದು ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.
ಸಂಪುಟ ಸಭೆ ಈಗಾಗಲೇ 1250 ಕೋಟಿ ರೂಪಾಯಿಗಳ ಹೆಚ್ಚುವರಿ ಶೇರುಗಳನ್ನು ನೀಡಿಲು ನಿರ್ಧರಿಸಿದ್ದು, ಶೀಘ್ರದಲ್ಲಿ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಸಂಪುಟ ಸಭೆ ಬ್ಯಾಂಕ್‌ಗಳ ಮೂಲಕ ಅಥವಾ ಇನ್ನಿತರ ಹಣಕಾಸು ಸಂಸ್ಥೆಗಳ ಮೂಲಕ 2750 ಕೋಟಿ ರೂಪಾಯಿಗಳ ದೀರ್ಘಾವಧಿ ಸಾಲದ ಮೊತ್ತವನ್ನು ನೀಡಲು ಸಮ್ಮತಿಸಿದ್ದು, ಲೋಕಸಭೆಗೆ ನಡೆಯುವ ಚುನಾವಣೆಗೆ ಮುನ್ನ ಪ್ಯಾಕೇಜ್ ಘೋಷಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. |