ಮುಂಬೈ : ಅಮೆರಿಕ ಸರಕಾರ 829 ಬಿಲಿಯನ್ ಡಾಲರ್‌ಗಳ ಪ್ಯಾಕೇಜ್ ಘೋಷಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಡಾಲರ್ ಸ್ಥಿರತೆಯಿಂದಾಗಿ ರೂಪಾಯಿ ಮೌಲ್ಯ 14 ಪೈಸೆ ಕುಸಿತ ಕಂಡಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 48.57/58 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 14 ಪೈಸೆ ಕುಸಿತವಾಗಿ 48.71/72 ರೂಪಾಯಿಗಳಿಗೆ ತಲುಪಿದೆ.
ಅಮೆರಿಕ ಸಂಸತ್ತು ಉತ್ತೇಜನ ಪ್ಯಾಕೇಜ್ ಘೋಷಿಸುವ ನಿರೀಕ್ಷೆಯಲ್ಲಿ ಏಷ್ಯಾ ಶೇರುಪೇಟೆ ವಹಿವಾಟಿನಲ್ಲಿ ಡಾಲರ್ ಮೌಲ್ಯ ಹೆಚ್ಚಳವಾಗಿದೆ ಎಂದು ವಿದೇಶಿ ವಿನಿಮಯ ಮಾರುಕಟ್ಟೆಯ ತಜ್ಞರು ಹೇಳಿದ್ದಾರೆ. |