ದೇಶದ ಪ್ರಮುಖ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಮೂಲ ದರದಲ್ಲಿ 2 ಸಾವಿರ ರೂಪಾಯಿ ಹೆಚ್ಚಳವನ್ನು ಪ್ರಕಟಿಸಿವೆ ಎಂದು ಮೂಲಗಳು ತಿಳಿಸಿವೆ.
ಮೂಲ ದರವನ್ನು 99 ರೂಪಾಯಿಗಳಿಗೆ ಇಳಿಕೆ ಮಾಡಿದರೂ ಕೂಡಾ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗದ ಹಿನ್ನೆಲೆಯಲ್ಲಿ ಮೂಲದರವನ್ನು ಹೆಚ್ಚಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆಗಳು ದರ ಏರಿಕೆಯನ್ನು ಸಮರ್ಥಿಸಿಕೊಂಡಿವೆ.
ವಿಮಾನಯಾನ ಸಂಸ್ಥೆಗಳು ಮೂಲ ದರವನ್ನು ಕಡಿತಗೊಳಿಸಿದರೂ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ದರ ಹೆಚ್ಚಿಸಲಾಗಿದೆ. ಆದರೆ ಮೂಲದರ ಕಡಿತ ಯೋಜನೆಯಡಿ ಮುಂಗಡ ಬುಕ್ಕಿಂಗ್ ಮಾಡಿದ ಪ್ರಯಾಣಿಕರಿಗೆ ಇದು ಅನ್ವಯವಾಗುವುದಿಲ್ಲ ಎಂದು ತಿಳಿಸಿವೆ.
|