ಮುಂಬೈ : ಪ್ರಸಕ್ತ ಆರ್ಥಿಕ ಸಾಲಿನಲ್ಲಿ ವರ್ಷಾಂತ್ಯದ ವೇಳೆಗೆ ದೇಶದ ರಫ್ತು ವಹಿವಾಟು ಶೇ.17 ರಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ. ಆದರೆ ಕೆಲ ಕ್ಷೇತ್ರಗಳಲ್ಲಿ ಹುದ್ದೆಗಳ ಕಡಿತವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ವಾಣಿಜ್ಯ ಖಾತೆ ಸಚಿವ ಕಮಲ್‌ನಾಥ್ ಹೇಳಿದ್ದಾರೆ.
ಜಾಗತಿಕ ಆರ್ಥಿಕ ಕುಸಿತದ ಮಧ್ಯೆಯು ದೇಶದ ಒಟ್ಟಾರೆ ರಫ್ತು ವಹಿವಾಟು ಶೇ,17 ಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ಸಚಿವ ಕಮಲ್‌ನಾಥ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆರ್ಥಿಕ ಕುಸಿತದಿಂದಾಗಿ ರಫ್ತು ವಹಿವಾಟು ಕೆಲ ಕ್ಷೇತ್ರಗಳಲ್ಲಿ ಕುಸಿವಾಗಿದ್ದರಿಂದ ಹುದ್ದೆಗಳು ಕಡಿತವಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಕೇಂದ್ರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ನೇರ ಮತ್ತು ಪರೋಕ್ಷ ವಿದೇಶಿ ಬಂಡವಾಳ ಹೂಡಿಕೆ ನೀತಿಯನ್ನು ಸರಳೀಕರಣಗೊಳಿಸಿದೆ ಎಂದು ಸಚಿವ ಕಮಲ್‌ನಾಥ್ ತಿಳಿಸಿದ್ದಾರೆ. |