ಸಿಂಗಾಪೂರ್ : ಆರ್ಥಿಕ ಕುಸಿತದಿಂದಾಗಿ ಗ್ರಾಹಕರ ಬೇಡಿಕೆಯಲ್ಲಿ ಇಳಿಮುಖವಾಗಿದ್ದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ 36 ಡಾಲರ್‌ಗೆ ಇಳಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಯಾರ್ಕ್ ಶೇರುಪೇಟೆಯಲ್ಲಿ ಸಾದಾ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ 10ಸೆಂಟ್‌ಗಳ ಇಳಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 36 ಡಾಲರ್‌ಗೆ ಕುಸಿತವಾಗಿದೆ.
ದೇಶದಲ್ಲಿ ನಿರುದ್ಯೋಗ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ತೈಲ ಗ್ರಾಹಕರ ಬೇಡಿಕೆಯಲ್ಲಿ ಕುಸಿತವಾಗುತ್ತಿದೆ ಎಂದು ಅಮೆರಿಕದ ಇಂಧನ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
|