ದೇಶದ ಖ್ಯಾತ ಉದ್ಯಮಿಗಳಾದ ಮುಕೇಶ್ ಅಂಬಾನಿ ಹಾಗೂ ವಿಪ್ರೋ ಮುಖ್ಯಸ್ಥ ಅಜೀಂ ಪ್ರೇಮ್‌ಜಿ,ಶುಕ್ರವಾರದಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತು ವಿಪ್ರೋ ಮುಖ್ಯಸ್ಥ ಅಜೀಂ ಪ್ರೇಮ್‌ಜಿ ಒಬಾಮಾ ಅವರೊಂದಿಗೆ ಸಂಪರ್ಕಿಸಿದ್ದು, ಭೇಟಿಗೆ ಶುಕ್ರವಾರದಂದು ದಿನಾಂಕ ನಿಗದಿಪಡಿಸಲಾಗಿದೆ ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.
ಅಂಬಾನಿ ಜೊತೆಯಲ್ಲಿ ಪತ್ನಿ ನೀತಾ ಉಪಸ್ಥಿತರಿರಲಿದ್ದಾರೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ವಕ್ತಾರರು ಖಚಿತಪಡಿಸಿದ್ದಾರೆ.
ಅಂಬಾನಿ ಹಾಗೂ ಪ್ರೇಮ್‌ಜಿ, ಬಿಜಿನೆಸ್ ಕೌನ್ಸಿಲ್ ನಿಯೋಗದ ಸದಸ್ಯರಾಗಿದ್ದು,ನಿಯೋಗದಲ್ಲಿ ಜಗತ್ತಿನ ಖ್ಯಾತ ಉದ್ಯಮಿಗಳು ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಮೆರಿಕದಲ್ಲಿ ಹೊರಗುತ್ತಿಗೆ ಉದ್ಯೋಗಗಳ ಕುರಿತಂತೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ನಿಲುವಿನ ಬಗ್ಗೆ ಚರ್ಚಿಸಲು ಪ್ರೇಮ್‌ಜಿ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. |